Breaking News

ರಿಯಾಜ್ ಫರಂಗಿಪೇಟೆ ಮನೆ ಮೇಲೆ NIA ದಾಳಿ ಖಂಡಿಸಿ ಹುಬ್ಬಳ್ಳಿಯಲ್ಲಿ SDPI ಪ್ರತಿಭಟನೆ…!

ಹುಬ್ಬಳ್ಳಿ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪಂಗಿಪೇಟೆ ಅವರ ಮನೆಯ ಮೇಲಿನ ಎನ್ಐಎ ದಾಳಿಯನ್ನು ಖಂಡಿಸಿ ಎಸ್ ಡಿಪಿಐ ಜಿಲ್ಲಾ ಘಟಕದ ಪದಾಧಿಕಾರಿಗಳು ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಮತ್ತು ವಿವಿಧ ಸುಳ್ಳು ಪ್ರಕರಣಗಳನ್ನು ನೆಪವಾಗಿಟ್ಟುಕೊಂಡು ಬಿಜೆಪಿ ಸರ್ಕಾರ ಎಸ್ ಡಿಪಿಐ ವಿರುದ್ಧ ಷಡ್ಯಂತರ ರೂಪಿಸುತ್ತಿದೆ. ಎಸ್‌ಡಿಪಿಐ ಸಂಬಂಧಿತ ಕಾರ್ಯಕರ್ತರ ಮತ್ತು ಕಚೇರಿಗಳ ಮೇಲೆ ದಾಳಿ ಮಾಡುತ್ತಿದೆ. ಇದು ಕೇವಲ ರಾಜಕೀಯ ದ್ವೇಷವಾಗಿದೆ. ಇದು ಸರ್ಕಾರಿ ಪ್ರಾಯೋಜಿತ ಸೇಡಿನ ದಾಳಿಗಳಾಗಿದೆ. ಜನಪರ ಧ್ವನಿಯಾಗಿರುವ ಎಸ್ ಡಿಪಿಐ ಪಕ್ಷವನ್ನು ದುರ್ಬಲಗೊಳಿಸುವ ಷಡ್ಯಂತ್ರವಾಗಿದೆ ಎಂದು ದೂರಿದರು. ಇದೇ ವೇಳೆ ಎಐಎ, ಇಡಿ ಹೆಸರಿನಲ್ಲಿ ಬೆದರಿಸಿ ನಮ್ಮನ್ನು ಧಮನುಸಲು ಸಾಧ್ಯವಿಲ್ಲ, ಜೀವ ಉಳಿಸಲು ಶ್ರಮಿಸುವವರು ನಾವು, ಕೊಲ್ಲುವ ಮನಸ್ಥಿತಿಯವರಲ್ಲ ಎಂಬ ಘೋಷಣೆ ಕೂಗಿದರು. ಆಬಳಿಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಎಸ್ ಡಿಪಿಐ ಮುಖಂಡ ಮುಕ್ತುಂಹುಸೇನ ಹೊಸಮನಿ ಮಾತನಾಡಿ, ರಿಯಾಜ್ ಪಂಗಿಪೇಟೆ ಮನೆಯ ಮೇಲಿನ ಎನ್ಐಎ ದಾಳಿ ರಾಜಕೀಯ ಪ್ರೇರಿತ, ಈ ದಾಳಿಗೆ ನಾವು ಹೆದರುವ ಮಾತಿಲ್ಲ. ಕಾಂಗ್ರೆಸ್ ಸೇರಿದಂತೆ ಇನ್ನಿತರ ವಿರೋಧ ಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಧ್ವನಿ ಎತ್ತುತ್ತಿಲ್ಲ. ಹೀಗಾಗಿ ನಾವು ಜನರ ಪರವಾಗಿ ಹೋರಾಟ ಮಾಡಿದರೇ ನಮ್ಮ ವಿರುದ್ಧ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ರಫೀಕ್, ಬೆಂಗಾಲಿ, ಸಮೀರ್ ಬೆಟಗೇರಿ, ಜಾವೀದ್ ಮಲಂಗನವರ, ತೌಸಿಕ್ ಇಲವಾನಿ ಸೇರಿದಂತೆ ಮುಂತಾದವರು ಇದ್ದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *