Breaking News

ಜವರಾಯನ ಅಟ್ಟಹಾಸಕ್ಕೆ ಏಳು ಮಂದಿ ದುರ್ಮರಣ


ಕೊರ್ಬಾ(ಛತ್ತೀಸ್​​ಗಢ): ಇಂದುಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸಕ್ಕೆ ಏಳು ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ಛತ್ತೀಸ್​​ಗಢದ ಕೊರ್ಬಾ ಎಂಬಲ್ಲಿ ನಡೆದಿದೆ.
ಇಲ್ಲಿನ ಪಾಂಡಿ ಉಪೋರ್ಡಾ ರಾಷ್ಟ್ರೀಯ ಹೆದ್ದಾರಿ 130ರಲ್ಲಿ ಅಪಘಾತ ಸಂಭವಿಸಿತು.

ವೇಗವಾಗಿ ಚಲಿಸುತ್ತಿದ್ದ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಅನೇಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.

ಖಾಸಗಿ ಟ್ರಾವೆಲ್ಸ್​​ಗೆ ಸೇರಿದ್ದ ಬಸ್​ ಛತ್ತೀಸ್​​​ಗಢ ರಾಜಧಾನಿ ರಾಯ್​ಪುರದಿಂಧ ಸರ್​​ಗುಜ್​​ಗೆ ತೆರಳುತ್ತಿತ್ತು. ಬೆಳಗ್ಗೆ 4 ಗಂಟೆ ವೇಳೆಗೆ ಬಂಗೋ ಪೊಲೀಸ್ ಠಾಣಾ ವ್ಯಾಪ್ತಿಯ ಮಡಾಯಿ ಘಾಟಿ ಬಳಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಟ್ರಕ್​​​ಗೆ ಡಿಕ್ಕಿ ಹೊಡೆದಿದೆ. ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಈ ಅವಘಡ ಸಂಭವಿಸಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *