Breaking News

ಅರಣ್ಯ ಹುತಾತ್ಮರ ಕುಟುಂಬಕ್ಕೆ ಭದ್ರತೆ ಒದಗಿಸಿದ ಸಿಎಂ


ಬೆಂಗಳೂರು: ಅರಣ್ಯ ಹುತಾತ್ಮರ ಕುಟುಂಬಕ್ಕೆ ಸ್ಥಿರತೆ ಮತ್ತು ಭದ್ರತೆ ನೀಡುವ ದೃಷ್ಟಿಯಿಂದ ಹಾಲಿ 30 ಲಕ್ಷ ರೂ.ಇದ್ದ ಪರಿಹಾರದ ಮೊತ್ತವನ್ನು 50 ಲಕ್ಷ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಬೆಂಗಳೂರಿನಲ್ಲಿ ಭಾನುವಾರ ಅರಣ್ಯ ಇಲಾಖೆ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ 2022 ಸಮಾರಂಭದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸಿ ಮಾತನಾಡಿದರು. ಅರಣ್ಯ ಹುತಾತ್ಮರಿಗೆ 20 ಲಕ್ಷ ರೂ.ಗಳಿದ್ದ ಪರಿಹಾರವನ್ನು 30 ಲಕ್ಷ ರೂ.ಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೆಚ್ಚಿಸಿದ್ದರು. ಹುತಾತ್ಮರ ನೇಮಕಾತಿ, ಕಲ್ಯಾಣ ಎಲ್ಲವನ್ನೂ ಸರ್ಕಾರ ಅತ್ಯಂತ ಸಹಾನುಭೂತಿಯಿಂದ ಮಾಡಲಿದೆ. ನೀವು ಅರಣ್ಯ ರಕ್ಷಣೆ ಮಾಡಿ, ಸರ್ಕಾರ ನಿಮ್ಮ ರಕ್ಷಣೆ ಮಾಡುತ್ತದೆ ಎಂದು ತಿಳಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *