Breaking News

ಇಂದು ಮುರುಘಾಶರಣರ ಜಾಮೀನು ಅರ್ಜಿ ವಿಚಾರಣೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾಶರಣರ ಜಾಮೀನು ಅರ್ಜಿ ವಿಚಾರಣೆ ಇಂದು ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಲ್ಲಿ ನಡೆಯಲಿದೆ.

ಸ್ವಾಮೀಜಿಗೆ ಜೈಲು ವಾಸ ಮುಂದುವರಿಕೆ, ಜಾಮೀನು ಅಥವಾ ಆಸ್ಪತ್ರೆಗೆ ಸ್ಥಳಾಂತರ ಮಾಡುವ ಬಗ್ಗೆ ಇಂದು ನಿರ್ಧಾರವಾಗಲಿದೆ. ಸೆ. 14 ರವರೆಗೆ ಸ್ವಾಮೀಜಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಹೃದಯ ಚಿಕಿತ್ಸೆಗೆ ಸಂಬಂಧಿಸಿದಂತೆ ಆಸ್ಪತ್ರೆಗೆ ಸ್ಥಳಾಂತರಿಸಲು ಸ್ವಾಮೀಜಿ ಪರ ವಕೀಲರು ಮನವಿ ಮಾಡಿದ್ದು, ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಕೋರ್ಟ್ ಸೂಚನೆ ನೀಡಿತ್ತು. ಆಂಜಿಯೋಗ್ರಾಮ್ ಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕರೆದೊಯ್ಯಲು ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ. ಇದರ ಬಗ್ಗೆಯೂ ಶ್ರೀಗಳ ಆರೋಗ್ಯ ಪರಿಸ್ಥಿತಿ ವರದಿ ಆಧಾರದ ಮೇಲೆ ಕೋರ್ಟ್ ಸೂಚನೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *