Breaking News

ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಆಟೋ : ಚಾಲಕ‌ ಸಾವು


ಉಳ್ಳಾಲ: ಆಟೋ ರಿಕ್ಷಾ ಒಂದು ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾನೀರು ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.

ಮೃತರನ್ನು ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಬಳಿಯ ನಿವಾಸಿ ಆನಂದ್ ಸಫಲ್ಯ(70) ಎಂದು ಗುರುತಿಸಲಾಗಿದೆ.ಆನಂದ್ ಅವರು ನಿನ್ನೆ ರಾತ್ರಿ ಬಾಡಿಗೆಗೆ‌ ತೆರಳಿ ಹಿಂತಿರುಗುತ್ತಿರುವ ವೇಳೆ ಅವಘಡ ನಡೆದಿದೆ.ರಾತ್ರಿ 8.45 ರ ವೇಳೆಗೆ ಪಾನೀರು ಅಸ್ಸಿಸಿ ಶಾಲೆ ಬಳಿ ಆನಂದ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಉರುಳಿ ಕಮರಿಗೆ ಬಿದ್ದಿದೆ ಎನ್ನಲಾಗಿದೆ.ಮೃತರು ಪತ್ನಿ, ಪುತ್ರ, ಪುತ್ರಿಯನ್ನ ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *