Breaking News

ಸಮಾಜಸೇವಕ ಡಾ.ರಾಮಕೃಷ್ಣರಾವ್ ನಿಧನ


ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಕನ್ನಡದ ಮಹಾನ್ ವಿಜ್ಞಾನ ಬರಹಗಾರ, ಪ್ರಾಧ್ಯಾಪಕ, ಸಮಾಜಸೇವಕ ಡಾ.ರಾಮಕೃಷ್ಣರಾವ್(87) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ​ ನಿಧನರಾಗಿದ್ದಾರೆ.

ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಭೌತಶಾಸ್ತ್ರ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗಗಳ ಮುಖ್ಯಸ್ಥರಾಗಿ ಸೇವೆಸಲ್ಲಿಸಿ ನಿವೃತ್ತರಾಗಿದ್ದಾರೆ. ನಿವೃತ್ತಿಯ ನಂತರ ಸಂದರ್ಶಕ ಪ್ರಾಧ್ಯಾಪಕರಾಗಿ ಬೆಂಗಳೂರು ನಗರದ ಯುವ ವಿದ್ಯಾರ್ಥಿಗಳಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸಲು ಬೆಂಗಳೂರು ಆಕಾಶವಾಣಿಯನ್ನು ಬಳಸಿಕೊಂಡು ವಿಜ್ಞಾನ ಪ್ರಸಾರದಲ್ಲಿ ಖಗೋಳಶಾಸ್ತ್ರ,ನಕ್ಷತ್ರಗಳು, ಗ್ರಹಗಳಿಗೆ ಸಂಬಂಧಿಸಿದ ನಕ್ಷತ್ರ ವೀಕ್ಷಣೆ, ಮುಂತಾದ ಕಾರ್ಯಕ್ರಮಗಳನ್ನು ಸತತವಾಗಿ ನಡೆಸಿಕೊಟ್ಟ ಪ್ರಮುಖರಲ್ಲೊಬ್ಬರು.

ಬೆಂಗಳೂರು ದೂರದರ್ಶನ’ದಲ್ಲಿ ಹಿರಿಯ ವಿಜ್ಞಾನಿಗಳಾದ, ಡಾ.ರಾಜಾರಾಮಣ್ಣ, ಡಾ. ಸಿ. ಎನ್. ಆರ್. ರಾವ್ ಡಾ.ಯು. ಆರ್. ರಾವ್, ಡಾ.ಎಮ್.ಆರ್ ಶ್ರೀನಿವಾಸನ್ ಮುಂತಾದವರ ಜೊತೆ ಸಂವಾದವನ್ನು ಮಾಡಿ, ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ.

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *