ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರಿಯ ವ್ಯವಹಾರದ ಪಾಲುದಾರರೆಂದು ವ್ಯಕ್ತಿಯನ್ನು ನಂಬಿಸಿ, ನಗರಾಭಿವೃದ್ಧಿ ಇಲಾಖೆಯಲ್ಲಿನ ಕಡತ ವಿಲೇವಾರಿ ಮಾಡಿಸುವುದಾಗಿ ಸಾಲದ ರೂಪದಲ್ಲಿ 40 ಲಕ್ಷ ರು. ಪಡೆದು ವಂಚಿಸಿದ ಆರೋಪದಡಿ ಮಹಿಳೆ ಸೇರಿ ನಾಲ್ವರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕರ್ನಾಟಕ ಹ್ಯೂಮನ್ ರೈಟ್ಸ್ ಡಿಫೆಂಡರ್ಸ್ ಪೇಪರ್‌ನ ಪತ್ರಕರ್ತ ಎಂ.ಆರ್.ರಾಜ್‌ಕುಮಾರ್ ನೀಡಿದ ದೂರಿನ ಮೇರೆಗೆ ಅಂಬಿಕಾ ಅಲಿಯಾಸ್ ನಾಗಲಾಂಬಿಕೆ, ಎಂಎಸ್‌ಡಿ ಕಾಮತ್, ರಮೇಶ್‌ಕುಮಾರ್ ಹಾಗೂ ಜಗದೀಶ್ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೂರುದಾರ ಎಂ.ಆರ್.ರಾಜ್‌ಕುಮಾರ್ 2021ರ ಜುಲೈ 23ರಂದು ಸದಾಶಿವನಗರದ ಸ್ಯಾಂಕಿ ರಸ್ತೆಯ ಕಾಫಿ ಡೇನಲ್ಲಿ ಪರಿಚಿತ ರಮೇಶ್ ಕುಮಾರ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ರಮೇಶ್‌ಕುಮಾರ್, ಎಂಎಸ್‌ಡಿ ಕಾಮತ್ ಎಂಬುವವರನ್ನು ರಾಜ್‌ಕುಮಾರ್‌ಗೆ ಪರಿಚಿಸಿದ್ದಾನೆ. ಮಾತಿನ ಮಧ್ಯ ರಾಜ್‌ಕುಮಾರ್, ತನ್ನ ಸ್ನೇಹಿತ ಗೋಪಾಲಕೃಷ್ಣ ಅವರಿಗೆ ಸರ್ಕಾರದಿಂದ .208.56 ಕೋಟಿ ಮೊತ್ತದ ಗುತ್ತಿಗೆ ಬಿಲ್ ಬಾಕಿ ಇದೆ ಎಂದಿದ್ದಾರೆ. ಈ ಬಾಕಿ ಬಿಲ್ ಕ್ಲಿಯರ್‌ಗೆ .30 ಕೋಟಿ ನೀಡಿದರೆ ಕೆಲಸ ಮಾಡಿ ಕೊಡುವುದಾಗಿ ಎಂಎಸ್‌ಡಿ ಕಾಮತ್ ಹೇಳಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

