Breaking News

ಬಿಜೆಪಿ ಅತಿ ದೊಡ್ಡ ಹಗರಣವನ್ನು ವಿಧಾನಸಭೆ ಕಲಾಪದಲ್ಲಿ ಬಯಲು ಮಾಡುವುದಾಗಿ : ಕುಮಾರಸ್ವಾಮಿ

ಬೆಂಗಳೂರು : ಸಾವಿರಾರು ಕೋಟಿ ರು. ಮೌಲ್ಯದ ಸರ್ಕಾರದ ಆಸ್ತಿ ಕಬಳಿಸುವ ಹುನ್ನಾರಕ್ಕೆ ಸಂಬಂಧಿಸಿದಂತೆ ಈ ಸರ್ಕಾರ ನಡೆಸಿರುವ ಅತಿ ದೊಡ್ಡ ಹಗರಣವನ್ನು ವಿಧಾನಸಭೆ ಕಲಾಪದಲ್ಲಿ ಬಯಲು ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ನೀಡಿ ಎಂದು ಪದೇ ಪದೇ ಕೆಣಕಿದ್ದಾರೆ. ಸಾವಿರಾರು ಕೋಟಿ ರು. ಮೌಲ್ಯದ ಸರ್ಕಾರಿ ಆಸ್ತಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಹೊರಟ ಅತಿದೊಡ್ಡ ಅಕ್ರಮದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ. ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್‌ ಪಕ್ಷ ಸಹಕರಿಸಬೇಕು.

ದಾಖಲೆಗಳನ್ನು ಬಿಡುಗಡೆ ಮಾಡುತ್ತಿರುವುದು ಸರ್ಕಾರದ ಹಗರಣಗಳ ಒಂದು ಸ್ಯಾಂಪಲ್‌ ಮಾತ್ರ. ಇದನ್ನು ಬಿಜೆಪಿಯವರು ಅರಗಿಸಿಕೊಳ್ಳಲಿ ಸಾಕು ಎಂದು ಕಿಡಿಕಾರಿದರು. ಸದನ ಸಮಯವನ್ನು ಹಾಳು ಮಾಡಲಾರೆ. ರಾಜ್ಯದಲ್ಲಿ ಇತ್ತೀಚೆಗೆ ಬೆಂಗಳೂರು ನಗರ ಸೇರಿ 22 ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈ ಬಗ್ಗೆ ಜೆಡಿಎಲ್‌ಪಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಬೆಳೆ ಹಾನಿ, ಮನೆ ಕುಸಿತವೂ ಆಗಿದೆ. ಈ ಕುರಿತು ಸದನದಲ್ಲಿ ವಿವರವಾಗಿ ಚರ್ಚೆ ಮಾಡಲು ತೀರ್ಮಾನಿಸಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *