Breaking News

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆ


ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ ಮತ್ತೆ 4,369 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,28,185 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 46,347 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.71ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,30,417 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 21,67,644 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,15,47,80,693 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,50,468 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *