Breaking News

ಸೆ. 26 ರಿಂದ ಅ. 10 ರವರೆಗೆ ದಸರಾ ರಜೆ : ಬಿ.ಸಿ. ನಾಗೇಶ್


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26 ರಿಂದ ಅ. 10 ರವರೆಗೆ ದಸರಾ ರಜೆ ನೀಡಲು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವರಾತ್ರಿ ಹಬ್ಬಕ್ಕೆ ಪೂರಕವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳಿಗೆ ದಸರಾ ರಜೆ ನೀಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ಮನವಿ ಮಾಡಿದ್ದರು.

ಇದಕ್ಕೆ ಸ್ಪಂದಿಸಿದ ಸಚಿವ ಬಿ.ಸಿ. ನಾಗೇಶ್ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 10ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ರಜೆ ನೀಡುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರಿಗೆ ಸೂಚನೆ ನೀಡಿದ್ದಾರೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆ ಮಾಡುವ ಷರತ್ತಿನೊಂದಿಗೆ ರಜೆ ನೀಡಲು ಸೂಚನೆ ನೀಡಲಾಗಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *