Breaking News

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹೆಂಡತಿ ಬಗ್ಗೆ ನಿಂದನೆ : ಮಹಿಳೆ‌ ಬಂಧನ



ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಅವರ ಫೇಸ್‌ಬುಕ್ ಪುಟದಲ್ಲಿ ನಿಂದನೀಯ ಹಾಗೂ ಅಸಭ್ಯವಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ 50 ವರ್ಷದ ಮಹಿಳೆಯೊಬ್ಬರನ್ನು ಸೈಬರ್ ಪೊಲೀಸ್ ಇಲಾಖೆ  ಬಂಧಿಸಿದೆ.

ಬಂಧಿತ ಮಹಿಳೆ ಸ್ಮೃತಿ ಪಾಂಚಾಲ್ ಅವರು ಕಳೆದ ಎರಡು ವರ್ಷಗಳಿಂದ ಅಮೃತಾ ಫಡ್ನವಿಸ್ ಅವರ ಅಧಿಕೃತ ಸಾಮಾಜಿಕ ಮಾಧ್ಯಮ ಪುಟದಲ್ಲಿ ಅನೇಕ ನಕಲಿ ಖಾತೆಗಳನ್ನು ಬಳಸಿಕೊಂಡು ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಂಚಾಲ್ ಅವರು 53 ನಕಲಿ ಫೇಸ್‌ಬುಕ್ ಐಡಿಗಳು ಹಾಗೂ 13 ಜಿಮೇಲ್ ಖಾತೆಗಳನ್ನು ರಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಲ್ಲಿನ ನ್ಯಾಯಾಲಯವು ಗುರುವಾರದವರೆಗೆ ಸ್ಮೃತಿ ಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ, ಪೊಲೀಸರು ಆಕೆಯ ಉದ್ದೇಶವನ್ನು ತನಿಖೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *