Breaking News

ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದು ನಿಶ್ಚಿತ : ಎಚ್.ಎಂ. ರೇವಣ್ಣ


ಬೀದರ್: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ಮಾಜಿ ಸಚಿವರೂ ಆದ ಕೆಪಿಸಿಸಿ ಉಪಾಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.

ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಜನಸಾಗರವನ್ನು ಕಂಡು ಬಿಜೆಪಿಗೆ ನಡುಕ ಉಂಟಾಗಿದೆ.

ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವ ಭೀತಿಯಿಂದ ಸಚಿವರು ಅವರ ವಿರುದ್ಧ ಸತ್ಯಕ್ಕೆ ದೂರವಾದ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.

ತಾಕತ್ತಿದ್ದರೆ ನಮ್ಮ ಗೆಲುವು ತಡೆಯಿರಿ ನೋಡೋಣ ಎಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಈ ರೀತಿಯ ಸವಾಲು ಹಾಕುವ ಬದಲು ಅಭಿವೃದ್ಧಿ ಮಾಡಿ ತೋರಿಸಬೇಕು. ಬಿಜೆಪಿಯವರಿಗೆ ಭಾಷಣವೇ ಬಂಡವಾಳ ಆಗಿದೆ ಎಂದು ಆರೋಪಿಸಿದರು. ಬಿಜೆಪಿ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಭ್ರಷ್ಟಾಚಾರದಿಂದ ಜನ ಬೇಸತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಕಂಡು ಬರುತ್ತಿದೆ ಎಂದು ತಿಳಿಸಿದರು.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *