ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದ್ದು, ಬುಧವಾರ ಸಹ ನಗರದ ಹಲವೆಡೆ ಜೋರು ಮಳೆ ದಾಖಲಾಗಿದೆ. ಈ ಪೈಕಿ ಕೋನೇನ ಅಗ್ರಹಾರದಲ್ಲಿ 25.5ಮಿ.ಮೀ. ಮಳೆ ದಾಖಲಾಗಿದೆ.
ನಗರದಲ್ಲಿ ಕಳೆದ ಶನಿವಾರದಿಂದ ವಾತಾವರಣದಲ್ಲಿ ತಾಪಮಾನ ಪ್ರಮಾಣ ಕಡಿಮೆಯಾಗಿದ್ದು, ಚಳಿ ಹಾಗೂ ಮೋಡ ಕವಿದ ವಾತಾವರಣವೇ ಕಂಡು ಬರುತ್ತಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಬದಲಾವಣೆಯ ಪರಿಣಾಮ ಮಂಗಳವಾರದಿಂದ ನಗರದಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಸುರಿಯುತ್ತಿದೆ. ಕೆಲವೊಮ್ಮೆ ನಗರದಲ್ಲಿ ಅಲ್ಲಲ್ಲಿ ಜೋರು ಮಳೆ ಕಂಡು ಬಂದಿದೆ. ಕೆಲವು ಪ್ರದೇಶಗಳಲ್ಲಿ ತಡರಾತ್ರಿವರೆಗೆ ತುಂತುರು ಮಳೆ ಮುಂದುವರಿಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

