Breaking News

ರಾಜಸ್ಥಾನದ ಮುಖ್ಯಮಂತ್ರಿ ಸ್ಥಾನಕ್ಕೆ ಪಕ್ಷದೊಳಗೇ ಕಚ್ಚಾಟ


ಜೈಪುರ: ಕಾಂಗ್ರೆಸ್‌ ಆಡಳಿತದಲ್ಲಿರುವ ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಕ್ಷದೊಳಗೇ ಕಚ್ಚಾಟ ನಡೆಯುತ್ತಿದೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆಯಿದ್ದು, ಗುರ್ಜರ್‌ ಸಮುದಾಯದ ಯುವ ನಾಯಕ ಸಚಿನ್‌ ಪೈಲಟ್‌ ಅವರನ್ನೇ ಮುಖ್ಯಮಂತ್ರಿಯನ್ನಾಗಿಸಬೇಕೆಂದು ಕಾಂಗ್ರೆಸ್‌ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.ಸೋಮವಾರ ರಾಜ್ಯ ಸಚಿವ ಅಶೋಕ್‌ ಚಾಂದ್ನಾ ಅವರು ಪುಷ್ಕರ್‌ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು, ಅದರಲ್ಲಿ ಅವರಿಗೆ ಮುಖಭಂಗವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರು ಸಚಿನ್‌ ಪೈಲಟ್‌ ಪರ ಘೋಷಣೆಗಳನ್ನು ಕೂಗಿದ್ದಷ್ಟೇ ಅಲ್ಲದೆ, ವೇದಿಕೆಯತ್ತ ಚಪ್ಪಲಿಗಳನ್ನೂ ಎಸೆದಿದ್ದಾರೆ.

“ಸಚಿನ್‌ ಅವರು ಸಿಎಂ ಆಗಬೇಕೆಂದು ತಮ್ಮ ಅಭಿಮಾನಿಗಳಿಂದ ಈ ರೀತಿ ಕೆಲಸ ಮಾಡಿಸಿದ್ದಾರೆ’ ಎಂದು ಸಚಿವರು ದೂರಿದ್ದಾರೆ. ಕೇವಲ ಅಶೋಕ್‌ ಮಾತ್ರವಲ್ಲದೆ, ಸಿಎಂಗೆ ಆಪ್ತರಾಗಿರುವ ಇನ್ನೋರ್ವ ಸಚಿವೆ ಶಕುಂತಲಾ ರಾವತ್‌ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲೂ ಇದೇ ರೀತಿ ಪರಿಸ್ಥಿತಿ ಉಂಟಾಗಿದ್ದು, ನಾಯಕರು ವೇದಿಕೆಯಿಂದ ಕೆಳಗಿಳಿದು ಹೋಗುವಂತಾಗಿದೆ.

Share News

About BigTv News

Check Also

ತೋಟದಲ್ಲಿ ಗಾಂಜಾ ಗಿಡ ಬೆಳೆದು ಸಿಕ್ಕಿಬಿದ್ದ ಪೊಲೀಸಪ್ಪನ ಪುತ್ರ: ಅತ್ತ ತಂದೆಯಿಂದ ಜಾಗೃತಿ, ಇತ್ತ ಮಗನಿಂದ ಕುಕೃತ್ಯ!

ತುಮಕೂರು: ಡ್ರಗ್ಸ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ, ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ಗಿಡ …

Leave a Reply

Your email address will not be published. Required fields are marked *