ಬೆಂಗಳೂರು : ಮಗಳು ಜಾನಕಿ ಧಾರಾವಾಹಿ ಮೂಲಕ ಕನ್ನಡಿಗರ ಮನಸು ಗೆದ್ದಿದ್ದ ಖ್ಯಾತ ಕಿರುತೆರೆ ಕಲಾವಿದ ಮಂಡ್ಯ ರವಿ ಅವರು ನಿಧನರಾಗಿದ್ದಾರೆ. ಟಿ.ಎನ್ ಸೀತಾರಾಮ್ ಅವರ ಪ್ರಸಿದ್ಧ ಧಾರಾವಾಹಿಗಳಲ್ಲಿ ನಟಿಸುತ್ತಾ ಬಂದಿರುವ ಹಿರಿಯ ಕನ್ನಡ ಕಿರುತೆರೆ ಕಲಾವಿದ ಮಂಡ್ಯ ರವಿ ಅವರು ನಟನೆಯಿಂದ ಕನ್ನಡಿಗರ ಮೆಚ್ಚುಗೆ ಗಳಿಸಿದ್ದರು.
ಕನ್ನಡ ಕಿರುತೆರೆ ಪ್ರೇಕ್ಷಕರ ಅಚ್ಚುಮೆಚ್ಚಿನ ನಟರಾಗಿದ್ದ ಅವರು ಇಂದಿಗೂ ಜನಪ್ರಿಯ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಾ ಕಿರುತೆರೆಯಲ್ಲಿ ಡಿಮ್ಯಾಂಡ್ ಉಳಿಸಿಕೊಂಡಿದ್ದರು.
ಅನಾರೋಗ್ಯದಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ನಟ ಮಂಡ್ಯ ರವಿ ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಮಂಡ್ಯದತ್ತ ಅವರ ಮೃತದೇಹವನ್ನು ಕೊಂಡೊಯ್ಯಲಾಗುತ್ತಿದೆ. ಅವರ ಕುಟುಂಬ ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಟಿ.ಎನ್ ಸೀತಾರಾಮ್ ಅವರ ಹಲವು ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

