Breaking News

ಮುರುಘಾ ಶ್ರೀಗಳಿಗೆ ಸದ್ಯಕ್ಕಿಲ್ಲಾ ರಿಲೀಫ್


‌
ಚಿತ್ರದುರ್ಗ: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೊ ಕಾಯ್ದೆಯಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಸದ್ಯಕ್ಕೆ ರಿಲೀಫ್‌ ಸಿಕ್ಕಿಲ್ಲ. ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳಿಗೆ ವಿಸ್ತರಿಸಲಾಗಿದೆ. ಸೆ.27ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಚಿತ್ರದುರ್ಗ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ವಿಧಿಸಿದ್ದ ನ್ಯಾಯಾಂಗ ಬಂಧನ ಇಂದಿಗೆ ಕೊನೆಯಾಗಿತ್ತು. ಮತ್ತೆ ವಿಚಾರಣೆ ನಡೆಸಿದ ನ್ಯಾಯಾಲಯ, ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಆದೇಶಿಸಿದೆ. ಕೋರ್ಟ್‌ನಿಂದ ಶ್ರೀಗಳನ್ನು ಮತ್ತೆ ಪೊಲೀಸರು ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ದರು. ಈಚೆಗೆ ಮುರುಘಾ ಶ್ರೀಗಳ ವಿರುದ್ಧ ಇಬ್ಬರು ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಗಂಭೀರ ಆರೋಪ ಹೊರಿಸಿದ್ದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *