ಚೆನ್ನೈ : ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನಂದ ಮಾಮನಿ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕರಾಗಿದ್ದು, ಕಳೆದ ಕೆಲ ದಿನಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ.
ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಎರಡು ದಿನಗಳ ಹಿಂದೆ ಚೆನ್ನೈಗೆ ಶಿಫ್ಟ್ ಮಾಡಲಾಗಿತ್ತು. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿರುವ ಹಿನ್ನೆಲೆ ನಾಳೆ ಅಥವಾ ನಾಡಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಪ್ಟ್ ಮಾಡುವ ಸಾಧ್ಯತೆ ಇದೆ.
ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ
ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಆನಂದ್ ಮಾಮನಿ ಅವರ ಆರೋಗ್ಯವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಕರೆ ಮಾಡಿ ವಿಚಾರಿಸಿದ್ದಾರೆ. ಸಕ್ಕರೆ ಕಾಯಿಲೆ, ತೀವ್ರ ಕತ್ತು ನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಸದ್ಯ ಆನಂದ್ ಮಾಮನಿ ಅವರು ಸಂಪೂರ್ಣ ವಿಶ್ರಾಂತಿಯಲ್ಲಿದ್ದಾರೆ. ಎರಡು ದಿನಗಳಲ್ಲಿ ಮಾಮನಿ ಅವರು ಬೆಂಗಳೂರಿಗೆ ಬರಲಿದ್ದಾರೆ ಎಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

