ಗೋವಾ : ಕಳೆದ ಕೆಲವು ದಿನಗಳಿಂದ ಗೋವಾದಲ್ಲಿ ನಡೆಯುತ್ತಿದ್ದ ರಾಜಕೀಯ ಬೆಳವಣಿಗೆ ಈಗ ಅಂತಿಮ ಘಟ್ಟ ತಲುಪಿದ್ದು 11 ಶಾಸಕರ ಪೈಕಿ 8 ಮಂದಿ ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಈ ಮೊದಲು ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಹಾಗೂ ವಿರೋಧ ಪಕ್ಷದ ನಾಯಕ ಮೈಕಲ್ ಲೋಬೋ ಕಾಂಗ್ರೆಸ್ ನಿಂದ ದೂರವಾಗಿದ್ದು, ಅಂತರ ಕಾಯ್ದುಕೊಂಡಿದ್ದರು. ಇದೀಗ ಇವರಿಬ್ಬರೂ ಸೇರಿದಂತೆ ಒಟ್ಟು ಎಂಟು ಮಂದಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದ್ದು, ವಿಧಾನಸಭಾ ಸ್ಪೀಕರ್ ಅವರನ್ನು ಭೇಟಿಯಾಗಿದ್ದಾರೆ.
ಒಂದು ವೇಳೆ ಎಂಟು ಮಂದಿ ಬಿಜೆಪಿ ಸೇರ್ಪಡೆಯಾದರೆ ಕಾಂಗ್ರೆಸ್ ನಲ್ಲಿ ಕೇವಲ ಮೂವರು ಶಾಸಕರು ಉಳಿಯಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

