ಮಂಡ್ಯ : ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ಇಂದು ಲಖನೌನಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಖುದ್ದು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಅವರು ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಆಹ್ವಾನ ನೀಡಿದರು.ಅಕ್ಟೋಬರ್ 13 ರಿಂದ 16 ರ ವರೆಗೂ ಕೆಆರ್ ಪೇಟೆಯ ಲಕ್ಷ್ಮಣತೀರ್ಥ-ಹೇಮಾವತಿ-ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದೆ. ಈ ಮಹಾಕುಂಭ ಮೇಳದಲ್ಲಿ ಅಕ್ಟೋಬರ್ 16 ರಂದು ಪಾಲ್ಗೊಳ್ಳುವುದಾಗಿ ಯೋಗಿ ಆದಿತ್ಯನಾಥ್ ಅವರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

