Breaking News

ಬಿಡಿಎ ಹಗರಣದಲ್ಲಿ ಯಡಿಯೂರಪ್ಪ ಶುದ್ದಹಸ್ತರಾಗಿ ಹೊರಬರಲಿದ್ದಾರೆ- ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡಿಎ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಹಸ್ತರಾಗಿ ಬರುತ್ತಾರೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಪ್ರಸ್ತುತ ಯಾವುದೇ ಸಂವಿಧಾನಾತ್ಮಕ ಹುದ್ದೆಯಲ್ಲಿಲ್ಲ‌. ಭಾರತದ ಕಾನೂನು ವ್ಯವಸ್ಥೆ ಅಡಿಯಲ್ಲಿ ತನಿಖೆ ನಡೆಯಲಿ. ನಮಗೆ ಕಾನೂನಿನ ಮೇಲೆ ವಿಶ್ವಾಸ ಇದೆ. ಆದರೆ ಯಡಿಯೂರಪ್ಪ ಬಗ್ಗೆ ಶಾಸಕ ಬಸವರಾಜ ಯತ್ನಾಳ ಏನೂ ಹೇಳಿಕೆ ಕೊಟ್ಟಿದ್ದಾರೆ ಎಂಬ ಸ್ಪಷ್ಟ ಮಾಹಿತಿ ನನಗಿಲ್ಲ ಎಂದರು.

ರಾಜಕೀಯ ಜೀವನದಲ್ಲಿ ಯಾರೇ ಆಗಲಿ ಅಸಭ್ಯ ವರ್ತನೆ ಸಲ್ಲದು, ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡುವುದು ಒಳಿತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜೋಶಿ ಟಾಂಗ್ ಕೊಟ್ಟರು.

ಬಿಜೆಪಿಗರು ಸಿದ್ದರಾಮಯ್ಯ ಕಚ್ಚಿ ಹರಕ ಎಂದು ಟೀಕಿಸುತ್ತಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡು ಮಾತನಾಡಿದ ಜೋಶಿ, ಸಿದ್ದರಾಮಯ್ಯ ಕೂಡಾ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ನಮ್ಮ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಬಗ್ಗೆ ಯಾವ ಆಧಾರದ ಮೇಲೆ ಲೂಟಿ ರವಿ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಇದರಲ್ಲಿ ಇಬ್ಬರದ್ದು ತಪ್ಪಿದೆ. ಹಾಗಾಗಿ ರಾಜಕೀಯದಲ್ಲಿ ಅಸಭ್ಯ ವರ್ತನೆ ಸಲ್ಲದು ಎಂದರು.

ಪ್ರಧಾನಿ ಹುಟ್ಟು ಹಬ್ಬದ ಹಿನ್ನೆಲೆ ಜಿಲ್ಲೆಯಲ್ಲಿ ಸೇವಾ ಪಾಕ್ಷಿಕ ಕಾರ್ಯಕ್ರಮ

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ನಿಮಿತ್ತವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನಮೋ ಅವರ ಜೀವನವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಸೇವಾ ಪಾಕ್ಷಿಕ ಕಾರ್ಯಕ್ರಮಕ್ಕೆ ಕರೆ ಕೊಟ್ಟಿದ್ದಾರೆ. ಅದರಂತೆ ಜಿಲ್ಲೆಯಲ್ಲಿ ಸಪ್ಟೆಂಬರ್ 17 ಮತ್ತು 18 ರಂದು ಅತಿದೊಡ್ಡ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಸೆಪ್ಟೆಂಬರ್ 18 ರಂದು ಜಿಲ್ಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಆಯೋಜಿದಲಾಗಿದ್ದು, ಅಂದು ನುರಿತ ತಜ್ಞ ವೈದ್ಯರುಗಳಿಂದ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ತಪಾಸಣೆ ಜರುಗಲಿದೆ. ಅಲ್ಲದೇ ಜಿಲ್ಲೆಯಲ್ಲಿ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಧಾರವಾಡ ಜಿಲ್ಲೆಯಲ್ಲಿ ಗಿನ್ನಿಸ್ ರೆಕಾರ್ಡ್ ನಿರ್ಮಾಣದ ಗುರಿಯನ್ನು ನಾವು ಹೊಂದಿದ್ದೇವೆ ಎಂದರು‌.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರದಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ಮೇಯರ್ ಈರೇಶ ಅಂಚಟಗೇರಿ, ಬಸವರಾಜ ಕುಂದಗೋಳಮಠ, ಡಾ.ಕ್ರಾಂತಿಕಿರಣ, ಮಹೇಶ ನಾಲವಾಡ, ಸಂಜಯ ಕಟಪಕರ, ಜಯತೀರ್ಥ ಕಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *