Breaking News

ವರುಣನ ಆರ್ಭಟಕ್ಕೆ ತತ್ತರಿಸಿದ ಜನರು

ಈ ಬಾರಿಯ ವರುಣರಾಯನ ಅಬ್ಬರ ಊಹಿಸಲು ಸಾಧ್ಯವಾಗುತ್ತಿಲ್ಲ. ಪ್ರತಿ ವರ್ಷದಂತೆ ನಿಗಧಿತ ಪ್ರಮಾಣದಲ್ಲಿ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸುರಿದಿದೆ. ಇನ್ನು ಕೆಲವು ಭಾಗಗಳಲ್ಲಿ ಮಳೆ  ಮುಂದುವರಿದಿದೆ. ಉತ್ತರ ಕರ್ನಾಟಕದ ಕಲಬುರಗಿ , ಬೀದರ್ ಜಿಲ್ಲೆಗಳಲ್ಲಿ ನಿರೀಕ್ಷೆಗೂ ಮೀರಿದ ಮಳೆಯಾಗಿದೆ.

ಜುಲೈ ತಿಂಗಳಿನಿಂದ ಕಲ್ಯಾಣ ಕರ್ನಾಟಕ ಭಾಗದ ನದಿಗಳು  ತುಂಬಿ ಹರಿಯುತ್ತಿವೆ. ಇನ್ನು ಕಳೆದ ಮೂರು ವಾರಗಳಿಂದ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದೆ. ಆದ್ರೆ ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ  ಸುರಿಯುತ್ತಿರುವ ಮಳೆಯಿಂದಾಗಿ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ಸತಾರಾ ಜಿಲ್ಲೆಯ ಕೊಯ್ನಾ ಜಲಾಶಯ ಸಹ ಭರ್ತಿಯಾಗಿದ್ದು, ಕೃಷ್ಣಾ ನದಿಗೆ ನೀರು ಹರಿಬಿಡಲಾಗುತ್ತಿದೆ. ಒಳಹರಿವು ಹೆಚ್ಚಳವಾದ್ರೆ ಹೊರ ಹರಿವು ಸಹ ಏರಿಕೆಯಾಗಲಿದೆ. ಒಂದು ವೇಳೆ ಕೊಯ್ನಾ ಜಲಾಶಯದಿಂದ ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದಲ್ಲಿ, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಉಂಟಾಗಬಹುದು. ಕೃಷಿ ಜಮೀನುಗಳು ಜಲಾವೃತಗೊಳ್ಳಬಹುದು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *