ಹುಬ್ಬಳ್ಳಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯನ್ನು ಹುಬ್ಬಳ್ಳಿಯಲ್ಲಿ ಮಾದರಿಯಾಗಿ ಆಚರಿಸಲಾಯಿತು.
ಪ್ರದಾಯನ ಮಂತ್ರಿ ನರೇಂದ್ರ ಮೋದಿ ಜನ್ಮ ದಿನದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ರಾಷ್ಟ್ರೋತ್ತಾನ ರಕ್ತನಿಧಿಯಲ್ಲಿ ರಕ್ತ ದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಂದ ರಕ್ತದಾನ ಮಾಡಿದರು. ಕೇಂದ್ರ ಸಚಿವರಿಗೆ ಮಾಜಿ ಸಿ ಎಂ ಜಗದೀಶ ಶೆಟ್ಟರ್ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸಾಥ್ ನೀಡಿದರು.
ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಹಲವು ಸೇವಾ ಕಾರ್ಯಗಳನ್ನ ಹಮ್ಮಿಕೊಳ್ಳಲಾಗಿದೆ. ಹುಬ್ಬಳ್ಳಿ ಧಾರವಾಡದಲ್ಲಿ ಹಲವು ಕಡೆ ಸ್ವಯಂ ಪ್ರೇರಿತವಾಗಿ ರಕ್ತದಾನ ಸೇರಿ ವಿವಿದ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಯುವಕರು ಸಾಕಷ್ಠು ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನ ಮಾಡ್ತಾಯಿದ್ದಾರೆ. ದಾಖಲೆಯ ಮಟ್ಟದಲ್ಲಿ ರಕ್ತದಾನ ನಡೆಯಲಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news




