Breaking News

ವಾಣಿಜ್ಯನಗರಿ ಹುಬ್ಬಳ್ಳಿಗೆ ರಾಷ್ಟ್ರಪತಿ ದೌಪದಿ ಮುರ್ಮು ಇದೇ 26 ರಂದು ಭೇಟಿ

ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಗೆ ರಾಷ್ಟ್ರಪತಿ ದೌಪದಿ ಮುರ್ಮು ಇದೇ 26 ರಂದು ಭೇಟಿ ನೀಡುವ ಮೂಲಕ ಮಹಾನಗರ ಪಾಲಿಕೆ ಪೌರಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ .

ರಾಷ್ಟ್ರಪತಿ ದೌಪದಿ ಮುರ್ಮುಗೆ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯಿಂದ ಪೌರಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಬೆಳಗ್ಗೆ 9 ಗಂಟೆಗೆ ಮೈಸೂರಲ್ಲಿ ದಸರಾಕ್ಕೆ ಚಾಲನೆ ನೀಡಿ ಅಲ್ಲಿಂದ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ .

,

ಬಳಿಕ 11 ಗಂಟೆಗೆ ಇಲ್ಲಿನ ಜಿಮ್ಖಾನಾ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪೌರಸನ್ಮಾನ ಸ್ವೀಕರಿಸಲಿರುವ ದೌಪದಿ ಮುರ್ಮು ರಾಷ್ಟ್ರಪತಿಯಾದ ಬಳಿಕ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ .

ಇನ್ನೂ ಅಂದಿನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೇಹಲೋತ್ , ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ . ಪೌರಸನ್ಮಾನ ಕಾರ್ಯಕ್ರಮದಲ್ಲಿ 3-5 ಸಾವಿರ ಜನರು ಸೇರುವ ಭರವಸೆ ಇದ್ದು , ಈ ಕಾರ್ಯಕ್ರಮ ಮುಗಿದ ಬಳಿದ ಧಾರವಾಡದ ಐಐಐಟಿಗೆ ಭೇಟಿ ನೀಡುವ ಸಾಧ್ಯತೆ ಇದೆ

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *