Breaking News

ಕೇಂದ್ರ ಸರ್ಕಾರದ ವಿರುದ್ಧ ಗ್ರಾಮೀಣ ಬ್ಯಾಂಕ್ ನೌಕರರ ಹೋರಾಟ

ಹುಬ್ಬಳ್ಳಿ : ಕೇಂದ್ರ ಸರ್ಕಾರ ಈಗಾಗಲೇ ಹಲವು ಇಲಾಖೆಗಳನ್ನ ಖಾಸಗೀಕರಣ ಮಾಡಿದೆ . ಇದರ ಬೆನ್ನಲ್ಲೇ ಬ್ಯಾಂಕುಗಳನ್ನ ಖಾಸಗೀಕರಣ ಮಾಡಲು ಹೊರಟಿದೆ . ಇದರಿಂದಾಗಿ ಬ್ಯಾಂಕ್ ನೌಕರರು ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲು ನಿರ್ಧರಿಸಿದ್ದಾರೆ .

ಹೌದು ಖಾಸಗೀಕರಣ ವಿರೋಧಿಸಿ ಒಂದೆಡೆ ರಸ್ತೆಗಿಳಿದು 2015 ರಿಂದ ಹೋರಾಟ ಮಾಡುತ್ತಿರುವವರು , ಇನ್ನೊಂದಡೆ ನೌಕರರು ಸಾಲಾಗಿ ನಿಂತು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುತ್ತಿರುವ ದೃಶ್ಯಗಳು ಇದಕ್ಕೆಲ್ಲ ಕಾರಣ ಕೇಂದ್ರ ಸರ್ಕಾರ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳನ್ನು ಖಾಸಗೀಕರಣ ಮಾಡಲು ಮುಂದಾಗಿರೋದು .

ಅಖಿಲ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರ ಒಕ್ಕೂಟದ ವತಿಯಿಂದ ಸೆಪ್ಟೆಂಬರ್ 23 ರಂದು , ಗ್ರಾಮೀಣ ಬ್ಯಾಂಕುಗಳಲ್ಲಿ ಒಂದು ದಿನದ ರಾಷ್ಟ್ರೀಯ ಮುಷ್ಕರವನ್ನು ಆಚರಿಸಲು ಕರೆ ಕೊಡಲು ಸಿದ್ಧತೆ ಮಾಡುತ್ತಿದ್ದಾರೆ

ಇನ್ನು 1976 ರಲ್ಲಿ ಪ್ರಾರಂಭವಾದ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಈವರೆಗೆ ಸಣ್ಣ ರೈತರು , ಅತಿ ಸಣ್ಣ ರೈತರು , ಗ್ರಾಮೀಣ ಕುಶಲಕರ್ಮಿಗಳು ಮತ್ತು ಸಣ್ಣ ಉದ್ಯಮಿಗಳಿಗೆ ಸಾಲ ಸೌಲಭ್ಯ ಒದಗಿಸಿ ಗ್ರಾಮೀಣ ಸಾಲ ವ್ಯವಸ್ಥೆಯನ್ನು ಸಮರ್ಥವಾಗಿ ನಿಭಾಯಿಸಿವೆ . ಇಲ್ಲಿಯವರೆಗೆ ದೇಶದಲ್ಲಿ 43 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು 22300 ಶಾಖೆಗಳನ್ನು ಹೊಂದಿದ್ದು , ಅದರಲ್ಲಿ 17 ರಾಜ್ಯಮಟ್ಟದ ಗ್ರಾಮೀಣ ಬ್ಯಾಂಕ್ ಗಳು ಈಗಾಗಲೇ ದೇಶದಲ್ಲಿ ಕಾರ್ಯನಿರ್ವಹಿಸುತ್ತಿವೆ .

ಇಷ್ಟೊಂದು ಒಳ್ಳೆಯದಾಗಿ ಕಾರ್ಯ ನಿರ್ವಹಿಸುತ್ತ ಹೋದರೂ ಕೂಡ ಕೇಂದ್ರ ಸರ್ಕಾರ ಖಾಸಗೀಕರಣ ಮಾಡುತ್ತಿರುವುದರಿಂದ ನೌಕರರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ . ಒಟ್ನಲ್ಲಿ ಗ್ರಾಮೀಣ ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡಬಾರದೆಂದು ಸಾಕಷ್ಟು ಹೋರಾಟ ಮಾಡಿದ್ದಾರೆ . ಕೂಡಲೇ ಈ ವಿಚಾರವನ್ನು ಇಲ್ಲಿಗೆ ಕೈ ಬಿಟ್ಟರೆ ಒಳ್ಳೆಯದು . ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು .

Share News

About BigTv News

Check Also

ಪೊಲೀಸರ ಮೇಲೆಯೇ ಹಲ್ಲೆ ಆರೋಪ.. ಗಂಟೆಗಳು ಕಳೆದರೂ FIR ಇಲ್ಲ!

ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …

Leave a Reply

Your email address will not be published. Required fields are marked *