Breaking News

ಬ್ರಿಟನ್ ರಾಣಿ ಅಂತ್ಯಕ್ರಿಯೆಗೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ


ಲಂಡನ್ : ಸೆಪ್ಟೆಂಬರ್ 19 ರಂದು ನಡೆಯಲಿರುವ ಬ್ರಿಟನ್ ರಾಣಿ ಎಲಿಜಬೆತ್-II ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ಸಂಜೆ ಲಂಡನ್ ಗೆ ಆಗಮಿಸಿದ್ದಾರೆ.

ಖಾಸಗಿ ವಿಮಾನದಲ್ಲಿ ಇಂಗ್ಲೆಂಡ್‍ಗೆ ತೆರಳಿದ್ದ ದ್ರೌಪದಿ ಮುರ್ಮು, ಭಾರತದ ಪರವಾಗಿ ರಾಜಮನೆತನಕ್ಕೆ ಸಂತಾಪ ಸೂಚಿಸಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ದ್ರೌಪದಿ ಮುರ್ಮು ಲಂಡನ್‍ನಲ್ಲಿ ರಾಣಿ ಎಲಿಜಬೆತ್-II ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದೇನೆ ಎಂದು ಪೋಸ್ಟ್ ಹಾಕಿಕೊಂಡಿದ್ದಾರೆ.

ಸೆಪ್ಟೆಂಬರ್ ೮ ರಂದು ಸ್ಕಾಟ್ಲೆಂಡ್ ನ ಬಾಲ್ಮೋರಲ್ ಕ್ಯಾಸಲ್‌ ನಲ್ಲಿರುವ ನಿವಾಸದಲ್ಲಿ 96 ವರ್ಷ ವರ್ಷದ ರಾಣಿ ಎಲಿಜಬೆತ್‌ ನಿಧನರಾಗಿದ್ದರು. ನಾಳೆ (ಸೆಪ್ಟೆಂಬರ್ 19) ಬೆಳಿಗ್ಗೆ ವೆಸ್ಟ್‌ಮಿನ್‌ಸ್ಟರ್‌ ಅಬ್ಬೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *