Breaking News

ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕನಸಿನ ಮಾತು : ಬಿ.ಎಸ್.ವೈ

ಹುಬ್ಬಳ್ಳಿ : ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕನಸಿನ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬೈಲಹೊಂಗಲಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಖಡಾಖಂಡಿತವಾಗಿ ನುಡಿದರು.

ಕಾಂಗ್ರೆಸ್ ನವರ ಭಾರತ ಜೋಡೋ ಯಾತ್ರೆ ವಿಫಲವಾಗಲಿದೆ ಎಂದ ಅವರು, ಜನತೆ ಬಿಜೆಪಿ ಹಾಗೂ ಪ್ರಧಾನಿ ಮೋದಿಯವರು ಪರವಾಗಿದ್ದಾರೆ ಎಂದು ಹೇಳಿದರು.

ಇದೇ ದಿ. ೨೨ ರಿಂದ ತಾವು ರಾಜ್ಯ ಪ್ರವಾಸ ಕೈಗೊಳ್ಳುತ್ತಿರುವುದಾಗಿ ಅವರು ತಿಳಿಸಿದರು.

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿನ ರೋಗಿಗಳ ಸಾವು ಪ್ರಕರಣದ ಕುರಿತಾದ ಪ್ರಶ್ನೆಗೆ ಉತ್ತರಿಸುತ್ತ, ಈ ಕುರಿತು ತನಿಖೆ ನಡೆಯುತ್ತಿದೆ. ವರದಿ ಏನು ಬರುತ್ತದೋ ಕಾಯ್ದು ನೋಡೋಣ ಎಂದು ಯಡಿಯೂರಪ್ಪ ಹೇಳಿದರು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *