ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ಕಾರ್ಯಾಂಗ ಸರ್ಕಾರದ ಪ್ರಮುಖವಾದ ಒಂದು ಭಾಗ ಮತ್ತು ಅಂಗ. ಬೆಳಗ್ಗೆಯಿಂದ ಸಂಜೆಯವರೆಗೆ ಮಾಡುವ ಕೆಲಸ, ಕರ್ತವ್ಯ ಎನಿಸುತ್ತದೆ. ಬದುಕಿನಲ್ಲಿ ಸೇವೆ ಮಾಡಿ ಸಂತೃಪ್ತಿ ಪಡೆಯುವುದು ಕಾಯಕ. ಸರ್ಕಾರಕ್ಕೆ ತೆರಿಗೆ ಪಾವತಿಸುವ ಪ್ರಜೆಗಳೇ ನಮ್ಮ ಮಾಲೀಕರು. ಆದ ಕಾರಣ, ಕಾಲಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪ್ರಜೆಗಳ ನೋವು ನಲಿವುಗಳಿಗೆ ಸ್ಪಂದಿಸಿ ಎಂದರು.
ರಾಜ್ಯ ಸರ್ಕಾರದ ವತಿಯಿಂದ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ ಸರ್ಕಾರಿ ನೌಕರರ ದಿನಾಚರಣೆಯ ಸುಸಂದರ್ಭದಲ್ಲಿ ಆರೋಗ್ಯ ಸಂಜೀವಿನಿ ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಚಾಲನೆ ನೀಡಿ, 30 ನೌಕರರಿಗೆ ತಲಾ ಐವತ್ತು ಸಾವಿರ ರೂಪಾಯಿ ನಗದು ಒಳಗೊಂಡ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಮಾತನಾಡಿ ಸರ್ಕಾರಿ ಸೇವೆಗೆ ಬರಲು ದೇವರ ಆಶೀರ್ವಾದ ಇರಬೇಕು. ಆದ ಕಾರಣ, ಸರ್ಕಾರಿ ನೌಕರರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

