Breaking News

ಬ್ರಿಟನ್‌ ರಾಣಿ ನಿಧನ : 500ಕ್ಕೂ ಹೆಚ್ಚು ಜಾಗತಿಕ ನಾಯಕರು ರಾಣಿಗೆ ಅಂತಿಮ ವಿದಾಯ



ಲಂಡನ್‌: ಸೆ.8ರಂದು ನಿಧನರಾದ ಬ್ರಿಟನ್‌ ರಾಣಿ 2ನೇ ಎಲಿಜಬೆತ್‌ (96) ಅವರ ಅಂತ್ಯಸಂಸ್ಕಾರ ಇಂದು ನಡೆಯಲಿದ್ದು, ಬ್ರಿಟನ್‌ ರಾಜಧಾನಿ ಲಂಡನ್‌ನಲ್ಲಿ ಭಾರೀ ಸಿದ್ಧತೆ ನಡೆಸಲಾಗಿದೆ. ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ 500ಕ್ಕೂ ಹೆಚ್ಚು ಜಾಗತಿಕ ನಾಯಕರು ರಾಣಿಗೆ ಅಂತಿಮ ವಿದಾಯ ನೀಡಲು ಲಂಡನ್‌ಗೆ ಆಗಮಿಸಿದ್ದಾರೆ.

ರಾಣಿಯ ಅಂತ್ಯಸಂಸ್ಕಾರದ ಹಿನ್ನೆಲೆಯಲ್ಲಿ ರಾಷ್ಟ್ರದಾದ್ಯಂತ 10 ದಿನಗಳ ಶೋಕಾಚರಣೆ ಆಚರಿಸಲಾಗುತ್ತಿದ್ದು, ಇಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ. ಬ್ರಿಟನ್‌ ರಾಜ 3ನೇ ಚಾರ್ಲ್ಸ್ ಅವರ ಪತ್ನಿ ಕ್ಯಾಮಿಲಾ ಸೇರಿದಂತೆ ರಾಣಿಯ 5 ಮಕ್ಕಳು, ವಿಲಿಯಂ, ಹ್ಯಾರಿ ಸೇರಿದಂತೆ 8 ಮೊಮ್ಮಕ್ಕಳು ಅವರ ಪತ್ನಿಯರು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಬ್ರಿಟನ್‌ನಲ್ಲಿ ಸಾವಿರಾರು ಪೊಲೀಸರು, ಸೇನಾ ಅಧಿಕಾರಿಗಳನ್ನು ನೇಮಿಸಿ ಬಿಗಿ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಹೊರತುಪಡಿಸಿ ಉಳಿದೆಲ್ಲ ರಾಷ್ಟ್ರದ ಮುಖ್ಯಸ್ಥರು ಬಸ್‌ಗಳಲ್ಲಿ ರಾಣಿಯ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಆಗಮಿಸಲಿದ್ದಾರೆ. ಬೈಡೆನ್‌ಗೆ ತಮ್ಮ ವಿಶೇಷ ಭದ್ರತಾ ವಾಹನ ‘ಬೀಸ್ಟ್‌’ನಲ್ಲಿ ಬರಲು ಅನುಮತಿ ನೀಡಲಾಗಿದೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *