Breaking News

ಬ್ರಿಟನ್‌ ನೂತನ ರಾಜ 3ನೇ ಚಾರ್ಲ್ಸ್‌ ಅವರನ್ನು ಭೇಟಿ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು


ಲಂಡನ್‌: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬ್ರಿಟನ್‌ ನೂತನ ರಾಜ 3ನೇ ಚಾರ್ಲ್ಸ್‌ ಅವರನ್ನು ಭಾನುವಾರ ತಡ ರಾತ್ರಿ ಬಂಕಿಂಗ್‌ಹ್ಯಾಮ್‌ ಅರಮನೆಯಲ್ಲಿ ಭೇಟಿ ಮಾಡಿದರು.

ಮೂರು ದಿನದ ಭೇಟಿಗಾಗಿ ಇಲ್ಲಿಗೆ ಆಗಮಿಸಿರುವ ಅವರು ಇಂದು ರಾಣಿ ಎಲಿಜಬೆತ್‌ 2 ಅವರ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಂಕಿಂಗ್‌ಹ್ಯಾಮ್‌ ಅರಮನೆಯಲ್ಲಿ ರಾಜ 3ನೇ ಚಾರ್ಲ್ಸ್‌ ಅವರನ್ನು ಭೇಟಿ ಮಾಡಿ ಮಾತಕತೆ ನಡೆಸಿದರು ಎಂದು ಬ್ರಿಟನ್‌ ಮಾಧ್ಯಮಗಳು ವರದಿ ಮಾಡಿವೆ.

ಸೋಮವಾರ ಬ್ರಿಟನ್‌ ಸ್ಥಳೀಯ ಕಾಲಮಾನ ಬೆಳಿಗ್ಗೆ 11ಕ್ಕೆ ರಾಣಿ ಎಲಿಜಬೆತ್‌ 2 ಅವರ ಅಂತ್ಯಕ್ರಿಯೆ ವೆಸ್ಟ್‌ಮಿನಿಸ್ಟರ್ ಅಬೆಯಲ್ಲಿ ನಡೆಯಲಿದೆ. ಭಾರತ ಸರ್ಕಾರದ ಪರವಾಗಿ ರಾಷ್ಟ್ರಪತಿ ಅವರು ಗೌರವ ನಮನ ಸಲ್ಲಿಸಲಿದ್ದಾರೆ. ರಾಣಿ ಎಲಿಜಬೆತ್‌ 2 ನಿಧನದ ಬಳಿಕ ಸೆಪ್ಟೆಂಬರ್‌ 10ರಂದು ಇಲ್ಲಿನ ಸೇಂಟ್‌ ಜೇಮ್ಸ್‌ ಅರಮನೆಯಲ್ಲಿ ನೂತನ ರಾಜರಾಗಿ 3ನೇ ಚಾರ್ಲ್ಸ್‌ ಪದಗ್ರಹಣ ಮಾಡಿದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *