Breaking News

ಸಂವಿಧಾನ ಉಳಿಸಲು ಸಾಮಾಜಿಕ ಹೋರಾಟದ ಅವಶ್ಯಕತೆ ಇದೆ : ಪ್ರಕಾಶ ಅಂಬೇಡ್ಕರ್

ಹುಬ್ಬಳ್ಳಿ: ಆರ್ ಎಸ್ ಎಸ್ ಬಿಜೆಪಿ ಟೇಬಲ್ ಮೇಲೆ ಸಂವಿಧಾನ ಬದಲಾವಣೆ ಅಜೆಂಡಾ ಇಟ್ಟಿದೆ. ಹೀಗಾಗಿ ಸಂವಿಧಾನ ಉಳಿಸಲು ಸಾಮಾಜಿಕ ಹೋರಾಟದ ಅವಶ್ಯಕತೆ ಇದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಮೊಮ್ಮಗ ಪ್ರಕಾಶ ಅಂಬೇಡ್ಕರ್ ಹೇಳಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1950 ರಲ್ಲಿ ಆರ್ ಎಸ್ ಎಸ್ ಈ ಸಂವಿಧಾನ ನಮ್ಮದಲ್ಲ ಎಂದು ಹೇಳಿತ್ತು. ನಮಗೆ ಯಾವಾಗ ಅವಕಾಶ ಸಿಗುತ್ತೋ, ಆ ದಿನ ಅದನ್ನ ನಾವು ಬದಲಾವಣೆ ಮಾಡ್ತೆವೆ ಎಂದಿದ್ದಾರೆ. ಇವರ ಉದ್ದೇಶನೇ ಸಂವಿಧಾನ ಬದಲಿಸಬೇಕು ಎಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಲ್ಲಿವರೆಗೆ‌ ಇವರು ದೇಶದ ಅರ್ಧ ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲ್ಲ, ಲೋಕಸಭೆ ಎಲ್ಲಿವರೆಗೆ ಗೆಲ್ಲಲ್ಲ
ಅಲ್ಲಿವರೆಗೆ ಅವರು ಈ ಮಾತನ್ನ ಆಡಿಲ್ಲ, ಬಿಜೆಪಿ ಎಲ್ಲ ರಾಜ್ಯಗಳಲ್ಲಿ ರಾಜಕೀಯ ಸಂಘಟನೆ ಅಳಿಸಲು ಮುಂದಾಗಿದೆ. ತಮ್ಮ ಅಧಿಕಾರಕ್ಕಾಗಿ ಈ ರೀತಿ ಮಾಡುತ್ತಿದೆ ಎಂದರು.

ಆರ್ ಎಸ್ ಎಸ್ ಬಿಜೆಪಿ ಟೆಬಲ್ ಮೇಲೆ ಸಂವಿಧಾನ ಬದಲಾವಣೆಯ ಅಜೆಂಡಾ ಇದೆ. ಪರಿವಾರದ ಸಂರಕ್ಷಣೆ, ಸಾಮಾಜಿಕ ಸಂರಕ್ಷಣೆ ಅಲ್ಲ. ಅದಕ್ಕಾಗಿ ಜನರು ಶಿಕ್ಷಣ ಕೊಡಿಸುವುದು ಮಾತ್ರ ಅವಶ್ಯಕತೆ ಇಲ್ಲಾ. ಮೀಸಲಾತಿಯೇ ಇರದೇ ಇದ್ರೆ ನಿಮ್ಮ ಮಕ್ಕಳು ಶಿಕ್ಷಣ ಪಡೆಯಲು ಆಗಲ್ಲ. ನೌಕರಿ ಕೂಡಾ ಸಿಗಲ್ಲ. ಯಾರು ತಮ್ಮ ಪರಿವಾರದ ವಿಚಾರ ಮಾಡುತ್ತಿದ್ದಾರೆ, ಅವರಿಗೆ ಸಾಮಾಜಿಕ ಜವಾಬ್ದಾರಿ ಕೂಡಾ ಇದೆ. ಸಾಮಾಜಿಕ ಜವಾಬ್ದಾರಿ ಮಾಡಬೇಕಾದ್ರೆ ಸಂವಿಧಾನ ಉಳಿಸಬೇಕು. ತಮ್ಮ‌ ಜವಾಬ್ದಾರಿ ಮರೆತವನು ತಮ್ಮ ಮಕ್ಕಳನ್ನ ಬಂಧನದಲ್ಲಿ ಇಡುವಂತೆ ಆಗಲಿದೆ. ಹೀಗಾಗಿ ಸಂವಿಧಾನ ಉಳಿಸಲು ಸಾಮಾಜಿಕ ಹೋರಾಟ ಅವಶ್ಯಕತೆ ಇದೆ ಎಂದು ಪ್ರಕಾಶ ಅಂಬೇಡ್ಕರ್ ಹೇಳಿದರು.

ಭಾರತ ಜೋಡೊ ಯಾತ್ರಾ ವಿಚಾರವಾಗಿ ಮಾತನಾಡಿ, ಭಾರತ ಒಡೆದಿಲ್ಲ, ಒಡೆದಿದ್ರೆ ಅದನ್ನ ಜೋಡಿಸಬಹುದು. ಹೀಗಾಗಿ ಒಡದೇ ಇಲ್ಲ ಎಂದರೆ ಜೋಡಿಸುವ ಮಾತೇ ಇಲ್ಲಾ. ವಿಚಾರ ಮಾಡುವ ರಾಜಕಾರಣ ಕಾಂಗ್ರೆಸ್ ನಲ್ಲಿ ಇಲ್ಲವೇ ಇಲ್ಲಾ. ಕಾಂಗ್ರೆಸ್ ದಾರಿ ತಪ್ಪಿಸುವ ರಾಜಕೀಯ ಬಿಜೆಪಿ ಮಾಡುತ್ತಿದೆ. ಬಿಜೆಪಿಗೆ ಸಹಾಯ ಮಾಡುವ ರಾಜಕಾರಣ ಕಾಂಗ್ರೆಸ್ ಮಾಡುತ್ತಿದೆ. ಅದಕ್ಕಾಗಿ ಬಿಜೆಪಿಯ ಧೈರ್ಯ ಬೆಳೆಯುತ್ತಿದೆ. ಅದರಿಂದ ಸಂವಿಧಾನ ಬದಲಾವಣೆ ಬಗ್ಗೆ ಅವರು ಮಾತನಾಡುತಿದ್ದಾರೆ ಎಂದು ಸಿಟ್ಟಾದರು.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *