Breaking News

438 ‘ನಮ್ಮ ಕ್ಲಿನಿಕ್‌’ಗಳನ್ನು ಅಕ್ಟೋಬರ್‌ ಅಂತ್ಯದೊಳಗೆ ಸಂಪೂರ್ಣವಾಗಿ ಆರಂಭ : ಡಾ.ಕೆ.ಸುಧಾಕರ್‌


ವಿಧಾನ ಪರಿಷತ್‌ : ನಗರ ಪ್ರದೇಶದ ಕೊಳೆಗೇರಿ, ಕೊಳೆಗೇರಿ ಸ್ವರೂಪ ಪಡೆದಿರುವ ಹಾಗೂ ದುರ್ಬಲ ವರ್ಗ ವಾಸಿಸುವ ಸ್ಥಳಗಳಲ್ಲಿ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ ಒದಗಿಸಲು ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಹಾಗೂ ಇತರ ಜಿಲ್ಲೆಗಳಲ್ಲಿ 195 ಸೇರಿದಂತೆ ಒಟ್ಟು 438 ‘ನಮ್ಮ ಕ್ಲಿನಿಕ್‌’ಗಳನ್ನು ಅಕ್ಟೋಬರ್‌ ಅಂತ್ಯದೊಳಗೆ ಸಂಪೂರ್ಣವಾಗಿ ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಈ ಕ್ಲಿನಿಕ್‌ಗಳಲ್ಲಿ ಬಾಣಂತಿಯರು, ಗರ್ಭಿಣಿಯರು, ನವಜಾತ ಶಿಶು, ಮಕ್ಕಳು, ಕುಟುಂಬ ಕಲ್ಯಾಣ ಯೋಜನೆ ಸೇರಿದಂತೆ 12 ಸೇವೆಗಳನ್ನು ನೀಡಲಾಗುವುದು. ಪ್ರತಿ ಕ್ಲಿನಿಕ್‌ನಲ್ಲಿ ತಲಾ ಒಬ್ಬ ವೈದ್ಯಾಧಿಕಾರಿ, ಶುಶ್ರೂಷಕರು, ಪ್ರಯೋಗ ಶಾಲಾ ತಂತ್ರಜ್ಞರು ಹಾಗೂ ಗ್ರೂಪ್‌ ಡಿ ಸಿಬ್ಬಂದಿ ಇರುತ್ತಾರೆ. ಪ್ರತಿ ಕ್ಲಿನಿಕ್‌ಗೆ ಬಿಬಿಎಂಪಿಯಲ್ಲಿ 36.45 ಲಕ್ಷ ರು. ಇತರ ಜಿಲ್ಲೆಯಲ್ಲಿ 34.46 ಲಕ್ಷ ರು. ವೆಚ್ಚವಾಗಲಿದೆ ಎಂದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *