Breaking News

300 ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತಿದೆ : ಬಿ.ಸಿ ನಾಗೇಶ್‌


ಬೆಂಗಳೂರು: ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 200 ದೈಹಿಕ ಶಿಕ್ಷಕರು ಹಾಗೂ 100 ವಿವಿಧ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ತಿಳಿಸಿದರು.

ಸೋಮವಾರ ಪ್ರಶ್ನೋತ್ತರ ವೇಳೆ ಬಿಜೆಪಿಯ ಹೇಮಲತಾ ನಾಯಕ್‌ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಒಂದೂವರೆ ದಶಕದಿಂದ 2 ಸಾವಿರಕ್ಕೂ ಹೆಚ್ಚು ದೈಹಿಕ ಮತ್ತು ಚಿತ್ರಕಲಾ ಶಿಕ್ಷಕರ ಹುದ್ದೆಗಳ ಖಾಲಿ ಇವೆ.
ಇದುವರೆಗೆ ಯಾವುದೇ ಶಿಕ್ಷಕರ ನೇಮಕಾತಿ ಆಗಿಲ್ಲ. ಒಟ್ಟು 2120 ದೈಹಿಕ ಶಿಕ್ಷಕರು ಗ್ರೇಡ್‌-2 ಹುದ್ದೆಗಳನ್ನು ಭರ್ತಿ ಮಾಡುವ ಪ್ರಸ್ತಾವನೆ ಕುರಿತು ಆರ್ಥಿಕ ಇಲಾಖೆಯ ಕಳುಹಿಸಲಾಗಿದ್ದು, ಒಪ್ಪಿಗೆ ಸೂಚಿಸಿದ ಬಳಿಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಸ್ತುತ 200 ಪ್ರೌಢ ಶಾಲಾ ದೈಹಿಕ ಶಿಕ್ಷಕರನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಬೆನ್ನಲ್ಲೇ ನೂರು ವಿವಿಧ ಶಿಕ್ಷಕರ ನೇಮಕವನ್ನೂ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *