ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸದಂತೆ
ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ಗೆ ಜಿಲ್ಲಾಡಳಿತ ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಮುತಾಲಿಕ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿರುವ ನ್ಯಾ| ಎಂ.ನಾಗಪ್ರಸನ್ನ ಅವರಿದ್ದ ಪೀಠವು, ಪ್ರಕರಣವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ವರ್ಗಾವಣೆ ಮಾಡಿದ್ದು, ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಹೇಳಿದೆ. ಪೊಲೀಸ್ ಆಯುಕ್ತರು ಹೊರಡಿಸಿದ್ದ ಆದೇಶದ ಅವಧಿ ಈಗಾಗಲೇ ಮುಗಿದಿದ್ದು, ವಿಚಾರಣೆಗೆ ಮಾನ್ಯತೆ ಕಳೆದುಕೊಂಡಿರುವುದಾಗಿ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

