Breaking News

ವಾಣಿಜ್ಯನಗರಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ: ಪ್ರಕ್ಷುಬ್ಧ ವಾತಾವರಣ ನಿರ್ಮಾಣ

ಹುಬ್ಬಳ್ಳಿ: ಎಸ್ ಡಿಪಿಐ ಹಾಗೂ ಪಿಎಫ್ ಐ ಮೇಲೆ ಎನ್ ಐಎ ದಾಳಿ ವಿಚಾರವಾಗಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಎಸ್.ಡಿ.ಪಿ.ಐ ಹಾಗೂ ಪಿ.ಎಫ್.ಐ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲು ಮುಂದಾಗಿದ್ದು,ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಕಾರ್ಯಕರ್ತರು ಮುಂದಾಗಿದ್ದಾರೆ.

ಹುಬ್ಬಳ್ಳಿಯ ಕೌಲ್ ಪೇಟೆಯಲ್ಲಿ ಪ್ರತಿಭಟನೆ ನಡೆಸಿದ್ದು, ಪುನಾ ಬೆಂಗಳೂರು ಮುಖ್ಯ ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ ಮಾಡಿದ್ದಾರೆ.

ಗೋ ಬ್ಯಾಕ್ ಎನ್ಐಎ ಗೋ ಬ್ಯಾಕ್ ಎನ್ಐಎ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದು,ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾಗಿದ್ದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆ ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನಾ ನಿರತ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *