ಬೆಂಗಳೂರು : ನನ್ನ ಆರೋಗ್ಯ ಉತ್ತಮವಾಗಿದೆ. ಶೀಘ್ರದಲ್ಲೇ ನಾನು ಖುದ್ದಾಗಿ ಪಕ್ಷದ ಕಚೇರಿಗೆ ಭೇಟಿ ನೀಡುವುದರ ಜತೆಗೆ ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಈ ಬಗ್ಗೆ ಗುರುವಾರ ಪತ್ರಿಕಾ ಹೇಳಿಕ ಬಿಡುಗಡೆ ಮಾಡಿರುವ ಅವರು, ವೈದ್ಯರ ಸಲಹೆಯಂತೆ ಸದ್ಯಕ್ಕೆ ಕೆಲವು ದಿನಗಳ ಕಾಲ ಮನೆಯಿಂದಲೇ ನನ್ನ ಎಲ್ಲ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಿಸುತ್ತೇನೆ.
ಹೀಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲವು ದಿನಗಳ ಮಟ್ಟಿಗೆ ನನ್ನ ಭೇಟಿಗೆ ಬರುವುದು ಬೇಡ ಎಂದು ಅವರು ಮನವಿ ಮಾಡಿದ್ದಾರೆ. ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ಮಾಡಿದ್ದರು. ಆದಕಾರಣ ಕೆಲ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕಾಯಿತು. ಇನ್ನು ಕೆಲ ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಮುಖಂಡರು, ಕಾರ್ಯಕರ್ತರು ಅನ್ಯಥಾ ಭಾವಿಸಬಾರದು ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

