Breaking News

ಲಂಚ ಪಡೆಯುತ್ತಿದ್ದ ಪೊಲೀಸ್​ ಕಾನ್ಸ್​ಟೇಬಲ್​ ನ್ನು ಲೋಕಾಯುಕ್ತ ಪೊಲೀಸರ ಬಲೆಗೆ



ಕಲಬುರಗಿ: ಭ್ರಷ್ಟರ ಪಾಲಿಗೆ ದುಸ್ವಪ್ನವಾಗಿ ಕಾಡುತ್ತಿರುವ ಲೋಕಾಯುಕ್ತ ಪೊಲೀಸರು ತಮ್ಮ ಬೇಟೆಯನ್ನು ಮುಂದುವರಿಸಿದ್ದಾರೆ. ಕಲಬುರಗಿಯಲ್ಲಿ 30 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಪೊಲೀಸ್​ ಕಾನ್ಸ್​ಟೇಬಲ್​ ಮತ್ತು ಚಾಲಕನನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ.

ಜೇವರ್ಗಿ ಠಾಣೆಯ ಕಾನ್ಸ್​ಟೇಬಲ್ ಶಿವರಾಯ್ ಮತ್ತು ಕಾರು ಚಾಲಕ ಅವ್ವಣ್ಣ, ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ. ಮರಳು ಸಾಗಾಣಿಕೆ ಸಂಬಂಧ ಅಖಿಲ್ ಎಂಬುವರಿಂದ 30 ಸಾವಿರ ರೂಪಾಯಿ ಲಂಚ‌ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದ್ದು, ಶಿವರಾಯ್ ಮತ್ತು ಅವ್ವಣ್ಣ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಎಸ್​ಪಿ ಅಬ್ದುಲ್ ರೌಫ್ ಕರ್ನೂಲ್ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಪೇದೆಗಳಿಬ್ಬರನ್ನು ಲೋಕಾಯುಕ್ತ ಪೊಲೀಸರು ಸ್ಥಳದಲ್ಲೇ ಬಂಧಿಸಿದ್ದು, ಹೆಚ್ಚಿನ ವಿಚಾರಣೆಗೆ ಕರೆದೊಯ್ದಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆಯಿಂದ ಖದರ್ ಕಳೆದುಕೊಂಡು ಕಳಾಹೀನವಾಗಿದ್ದ ಲೋಕಾಯುಕ್ತಕ್ಕೆ ಹೈಕೋರ್ಟ್​ ಮರುಜೀವ ನೀಡಿದ ಬಳಿಕ, ಸಕ್ರೀಯವಾಗಿರುವ ಲೋಕಾಯುಕ್ತವು, ಸರ್ಕಾರದ ವ್ಯವಸ್ಥೆಯಲ್ಲಿ ಅಡಗಿರುವ ಭ್ರಷ್ಟರ ಮುಖವಾಡಗಳನ್ನು ಕಳಚುತ್ತಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *