ಬೆಂಗಳೂರು: ‘ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಬೈಲಾ ಉಲ್ಲಂಘಿಸಿ ಟ್ರಸ್ಟಿಗಳ ನೇಮಕ, ಪ್ರವೇಶ ಪ್ರಕ್ರಿಯೆ, ಶುಲ್ಕ ವಸೂಲಿ ಮತ್ತು ಜಮೀನಿನಲ್ಲಿ ಅಕ್ರಮ ನಡೆದಿದ್ದು, ಇದರಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಶಾಮೀಲಾಗಿರುವುದರಿಂದ ಅವರ ತಲೆದಂಡ ಆಗಲೇಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು.
ವಿಧಾನಸಭೆಯಲ್ಲಿ ಗುರುವಾರ ನಿಯಮ 69ರ ಅಡಿ ಈ ವಿಷಯವನ್ನು ಪ್ರಸ್ತಾಪಿಸಿದ ಅವರು, ಈ ವಿಷಯದ ಬಗ್ಗೆ ಒಂದೂವರೆ ಗಂಟೆಗಳ ಕಾಲ ಸುದೀರ್ಘ ವಿವರಣೆ ನೀಡಿದರಲ್ಲದೇ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದರು. ‘ಆರೋಪದಲ್ಲಿ ಯಾವುದೇ ಹುರುಳಿಲ್ಲ, ಆದ್ದರಿಂದ ತನಿಖೆಯ ಅಗತ್ಯವೇ ಇಲ್ಲ’ ಎಂದು ಸಚಿವ ಅಶ್ವತ್ಥನಾರಾಯಣ ಹೇಳಿದರು
ಸಚಿವರ ಉತ್ತರವನ್ನು ಪ್ರತಿಭಟಿಸಿ ಜೆಡಿಎಸ್ ಸದಸ್ಯರು ಸಭಾಧ್ಯಕ್ಷರ ಪೀಠದ ಎದುರು ಧರಣಿಗೆ ಮುಂದಾದರು. ಆ ವೇಳೆ, ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಲಾಯಿತು. ಅದನ್ನು ಒಪ್ಪದ ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿಗೆ ಕುಳಿತರು.
bigtvnews | Hubli Dharwad News | Kannada News | Karnataka News Hubli News | News In Hubli | Local news

