ಬೆಂಗಳೂರು: PSI ನೇಮಕಾತಿ ಅಕ್ರಮದಲ್ಲಿ ರಾಜಕಾರಣಿಗಳಿದ್ದರೂ ತನಿಖೆ ಹಾದಿ ತಪ್ಪಬಾರದು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆಯಲ್ಲಿ ಅಕ್ರಮ ಮಾಡಿದವರು ಈಗಾಗಲೇ ಬಂಧನಕ್ಕೆ ಒಳಗಾಗಿದ್ದಾರೆ.
ಎಡಿಜಿಪಿ ಮಟ್ಟದ ಅಧಿಕಾರಿಯೊಬ್ಬರು ಸೇರಿದಂತೆ ಕೆಲವಾರು ಪೊಲೀಸ್ ಅಧಿಕಾರಿಗಳು, ತಪ್ಪೆಸಗಿದ ಅಭ್ಯರ್ಥಿಗಳನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಆದರೆ, ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರು ಅನ್ಯಾಯಕ್ಕೆ ತುತ್ತಾಗುತ್ತಿದ್ದಾರೆ ಎಂದರು. ಈ ಹಗರಣದ ತನಿಖೆ ಗಂಭೀರ ಹಂತ ತಲುಪಿದೆ ಅಂತ ನನ್ನ ಭಾವನೆ. ಈವರೆಗೆ 26 ಪೊಲೀಸರನ್ನು ಬಂಧನ ಮಾಡಲಾಗಿದೆ. ಬಹುತೇಕ ಪ್ರಕರಣಗಳಲ್ಲಿ ಆರೋಪಿತರು ಜಾಮೀನು ತೆಗೆದುಕೊಂಡು ಹೊರ ಬರುವುದನ್ನು ನೋಡಿದ್ದೇವೆ. ಆದರೆ, ಈ ಪ್ರಕರಣದಲ್ಲಿ ಆ ರೀತಿ ಆಗಿಲ್ಲ. ಅಂದರೆ, ತನಿಖೆ ಗಂಭೀರವಾಗಿ ನಡೆಯುತ್ತಿದೆ ಎಂದು ಅರ್ಥ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

