ಹುಬ್ಬಳ್ಳಿ : ಡಾ. ಪುನೀತ್ ರಾಜ್‍ಕುಮಾರ್ ಅವರ ಕನಸಿನ ಚಿತ್ರ ಗಂಧದ ಗುಡಿ ಸಿನಿಮಾಗೆ ಇನ್ನೂ ಒಂದು ತಿಂಗಳು ಬಾಕಿ ಇರುವಂತೆಯೇ ಕ್ರೇಜ್ ಹೆಚ್ಚಾಗಿದ್ದು, ನಗರದ ಚೆನ್ನಮ್ಮ ವೃತ್ತದಲ್ಲಿಂದು ಪುನೀತ್ ರಾಜ್‍ಕುಮಾರ್ ಅವರ ಕಟೌಟ್ ಗೆ ಹಾಲಿನ ಅಭಿಷೇಕ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಿ ಅಭಿಮಾನಿಗಳು ಸಂಭ್ರಮಿಸಿದರು.
ಡಾ. ಪುನೀತ್ ರಾಜ್‍ಕುಮಾರ್ ಅವರನ್ನು ಕೊನೆಯದಾಗಿ ಬೆಳ್ಳಿ ತೆರೆಯ ಮೇಲೆ ನೋಡುವ ಅವಕಾಶ ಗಂಧದ ಗುಡಿ ಸಿನಿಮಾದಿಂದ ಈಡೇರಲಿದ್ದು, ಅಕ್ಟೋಬರ್ ೨೮ ರಂದು ವಿಶ್ವಾದ್ಯಾಂತ ತೆರೆ ಕಾಣಲಿದ್ದು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಪುನೀತ್ ರಾಜ್‍ಕುಮಾರ್ ಅಗಲಿ ಅಕ್ಟೋಬರ್ ೨೯ ಕ್ಕೆ ಒಂದು ವರ್ಷ ಆಗಲಿದ್ದು, ಪುನೀತ್ ದರ್ಶನಕ್ಕೆ ಅಭಿಮಾನಿಗಳು ಒಂದು ತಿಂಗಳು ಮುಂಚೆಯೇ ಸಜ್ಜಾಗಿದ್ದಾರೆ.
ಇದೇ ಸಂದರ್ಭದಲ್ಲಿ ಅಭಿಮಾನಿಗಳು ಡಾ. ಪುನೀತ್ ರಾಜ್‍ಕುಮಾರ್ ಅವರಿಗೆ ಜಯವಾಗಲಿ, ಗಂಧದ ಗುಡಿ ಸಿನಿಮಾಗೆ ಜಯವಾಗಲಿ ಎಂದು ಜಯಘೋಷ ಕೂಗಿ ಅಭಿಮಾನ ವ್ಯಕ್ತಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

