Breaking News

ವಚನ ಭ್ರಷ್ಟರಾದ ಮುಖ್ಯಮಂತ್ರಿಗಳ ದಲಿತ ವಿರೋಧಿ ಉಗ್ರ ಪ್ರತಿಭಟನೆ ಮಾಡಲಾಗುವುದು :ವಿಜಯ ಗುಂಟ್ರಾಳ

ಹುಬ್ಬಳ್ಳಿ: ಪೌರಕಾರ್ಮಿಕರನ್ನು ಖಾಯಂಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿಗಳು ಮಾತು ತಪ್ಪಿದ್ದು, ಈ ಹಿನ್ನೆಲೆಯಲ್ಲಿ ವಚನ ಭ್ರಷ್ಟರಾದ ಮುಖ್ಯಮಂತ್ರಿಗಳ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ ಪೌರಕಾರ್ಮಿಕರು ಗುತ್ತಿಗೆ ಪದ್ದತಿಯಲ್ಲಿ ಅಮಾನವೀಯ ಶೋಷಣೆಗೆ ಒಳಗಾಗಿ ಕನಿಷ್ಠ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ನಿಟ್ಟಿನಲ್ಲಿ ಜುಲೈ ತಿಂಗಳಲ್ಲಿ ರಾಜ್ಯಾದ್ಯಂತ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಂಡಾಗ ಸಿಎಂ ಬಸವರಾಜ ಬೊಮ್ಮಾಯಿ 33 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸುತ್ತೇವೆಂದು ಲಿಖಿತ ರೂಪದಲ್ಲಿ ಆಶ್ವಾಸನೆ ನೀಡಿದರು. ಅಲ್ಲದೇ ಸರ್ಕಾರ ಹಲವಾರು ಉನ್ನತ ಅಧಿಕಾರಿಗಳ ಸಭೆ ನಡೆಸಿ ಪೌರಕಾರ್ಮಿಕರ ಕಲ್ಯಾಣ ಯೋಜನೆಗಳಿಗಾಗಿ ಈಗಾಗಲೇ ರಾಜ್ಯದಲ್ಲಿರುವ ಐ.ಪಿ.ಡಿ ಸಾಲಪ್ಪ ವರದಿ- 1976, ಚಂದ್ರಶೇಖರ ವರದಿ- 2013 ಮತ್ತು ರಾಷ್ಟ್ರೀಯ ಕಾನೂನು ಶಾಲೆಯ ವರದಿ – 2021 ಸರ್ಕಾರಕ್ಕೆ ಸಲ್ಲಿಕೆಯಾಗಿದೆ.

ಈ ವರದಿಗಳು ಎಲ್ಲ ಪೌರಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ಅವರ ಕೆಲಸ ಮತ್ತು ಸೇವಾ ಸ್ಥಿತಿಗಳಲ್ಲಿನ ಉನ್ನತೀಕರಣಕ್ಕಾಗಿ ಕರ್ನಾಟಕ ಸಫಾಯಿ ಕರ್ಮಚಾರಿಗಳ ಕಾಯ್ದೆ ಎಂಬ ವಿಶೇಷ ಕಾಯ್ದೆಯನ್ನು ಸುಗ್ರಿವಾಜ್ಞೆ ಮೂಲಕ ಅಂಗೀಕರಿಸಬೇಕೆಂದು ತಿಳಿಸಲಾಗಿತ್ತು. ಆದರೆ ಇದೀಗ ಸರ್ಕಾರ ಇದ್ಯಾವ ಶಿಫಾರಸ್ಸುಗಳನ್ನು ಪರಿಗಣಿಸದೇ ತಾನೇ ರಚಿಸಿದ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನ ಮುಂದಾಗಿದೆ. ಇದು ಸಿಎಂ ನೀಡಿರುವ ಲಿಖಿತ ರೂಪದ ಆಶ್ವಾಸನೆಗೆ ತದ್ವಿರುದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ತಮ್ಮ ಮಾತನ್ನು ಉಳಿಸಿಕೊಂಡು ರಾಜ್ಯದ 33 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು. ಇಲ್ಲವಾದರೆ ಮಾತಿಗೆ ತಪ್ಪಿದ ಸಿಎಂ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಗಾಳೆಪ್ಪ ದ್ವಾಸಲಕೇರಿ, ಗಂಗಮ್ಮಾ ಸಿದ್ರಾಮಪುರ, ದತ್ತಪ್ಪ ಆಪುಸಪೇಟ, ಕನಕಪ್ಪ ಕೊಟಬಾಗಿ, ಲಕ್ಷ್ಮೀ ಬೇತಾಪಲ್ಲಿ, ಶಿವಮ್ಮ ಬೇವಿನಮರದ ಸೇರಿದಂತೆ ಮುಂತಾದವರು ಇದ್ದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *