ವಿಧಾನಸಭೆ: ಬಿಎಂಎಸ್ ಶಿಕ್ಷಣ ಟ್ರಸ್ಟ್‌ನ ಆಜೀವ ಸದಸ್ಯತ್ವವನ್ನು ಖಾಸಗಿ ವ್ಯಕ್ತಿಗೆ ನೀಡಿರುವುದು ಸೇರಿ ಟ್ರಸ್ಟ್‌ನಲ್ಲಿ ನಡೆದಿರುವ ಅವ್ಯವಹಾರವನ್ನು ಸಿಬಿಐ ಅಥವಾ ಸಿಒಡಿ ತನಿಖೆಗೆ ಒಪ್ಪಿಸುವಂತೆ ಜೆಡಿಎಸ್ ಧರಣಿ ಮುಂದುವರಿಸಿತು.ಸರ್ಕಾರ ತನಿಖೆಗೆ ಒಪ್ಪದ ಕಾರಣ ಗದ್ದಲದ ವಾತಾವರಣ ಉಂಟಾಗಿದ್ದರಿಂದ ಸದನ ಅರ್ನಿಷ್ಟಾವಧಿಗೆ ಮುಂದೂಡಲಾಯಿತು.
ಕಲಾಪ ಆರಂಭವಾಗುತ್ತಿದ್ದಂತೆ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಲು ಆರಂಭಿಸಿದ ಜೆಡಿಎಸ್ ಸದಸ್ಯರು, ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಘೋಷಣೆ ಕೂಗಿ, ಪೋಸ್ಟರ್ ಪ್ರದರ್ಶಿಸಿದರು. ಈ ವೇಳೆ ಸದಸ್ಯ ಕೆ.ಅನ್ನದಾನಿ ಪೋಸ್ಟರ್ ಹಿಡಿದು ಸ್ಪೀಕರ್ ಪೀಠದ ಬಳಿಗೆ ಬಂದರು. ಮಾರ್ಷಲ್‌ಗಳು ಅವರನ್ನು ತಡೆದರು.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿಕ್ರಿಯಿಸಿ, ಅನ್ನದಾನಿಯವರೇ ನೀವು ಪ್ರಾಧ್ಯಾಪಕರಾಗಿದ್ದವರು. ಏನು ಮಾಡಿದರೂ ನಡೆಯುತ್ತದೆ ಎನ್ನುವುದು ಸರಿಯಲ್ಲ. ಹೀಗೆಲ್ಲ ಮಾಡಬಾರದು. ಪೀಠಕ್ಕೆ ಅದರದ್ದೇ ಆದ ಗೌರವವಿದೆ. ಇಂತಹವುಗಳಿಗೆ ಅವಕಾಶ ನೀಡುವುದಿಲ್ಲ ಎಂದು ಗರಂ ಆದರು. ಪ್ರಶ್ನೋತ್ತರ ಅನಂತರ ಅಥವಾ ಸನದ ಹೊರಗೆ ಪ್ರತಿಭಟನೆ ಮುಂದುವರಿಸುವಂತೆ ಸ್ಪೀಕರ್ ಮನವಿ ಮಾಡಿದರೂ ಜೆಡಿಎಸ್ ಸದಸ್ಯರು ಪಟ್ಟು ಬಿಡಲಿಲ್ಲ. ಹೀಗಾಗಿ ಸದನವನ್ನು ಹತ್ತು ನಿಮಿಷ ಮುಂದೂಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

