Breaking News

ನಾನು ಅಕ್ರಮ ಮಾಡಿದ್ದರೆ ಅಪರಾಧಿ ಎಂದು ಸಾಬೀತುಪಡಿಸಿ ಜೈಲಿಗೆ ಹಾಕಿ : ಮಾಜಿ ಸಿಎಂ


ಬೆಂಗಳೂರು: ‘ಧಮ್‌ ಇದ್ದರೆ, ತಾಕತ್ತಿದ್ದರೆ’ ಎಂದು ವೀರಾವೇಶದ ಭಾಷಣ ಮಾಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಸರ್ಕಾರಕ್ಕೆ ತಾಕತ್ತಿದ್ದರೆ ನನ್ನ ಅವಧಿ ಸೇರಿ 2006ರಿಂದ ಈಚೆಗಿನ ಎಲ್ಲಾ ಅವ್ಯವಹಾರ ಆರೋಪಗಳ ಬಗ್ಗೆಯೂ ನ್ಯಾಯಾಂಗ ತನಿಖೆ ನಡೆಸಿ. ನಾನು ಅಕ್ರಮ ಮಾಡಿದ್ದರೆ ಅಪರಾಧಿ ಎಂದು ಸಾಬೀತುಪಡಿಸಿ ಜೈಲಿಗೆ ಹಾಕಿ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಎಸೆದಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ಬಿಜೆಪಿ ಪಕ್ಷದವರು ‘ಸಿದ್ದರಾಮಯ್ಯ, ಸ್ಕ್ಯಾ‌ಮ್‌ ರಾಮಯ್ಯ’ ಎಂಬ ಸುಳ್ಳಿನ ಪುಸ್ತಕ ಹೊರತಂದಿದ್ದಾರೆ. ನಾವು 40 ಪರ್ಸೆಂಟ್‌ ಭ್ರಷ್ಟಾಚಾರ, ಪಿಎಸ್‌ಐ ನೇಮಕಾತಿ ಹಗರಣ ಸೇರಿದಂತೆ ರಾಜ್ಯ ಸರ್ಕಾರದ ಹಗರಣಗಳನ್ನು ಬಯಲಿಗೆಳೆದಿದ್ದೇವೆ. ಇದರಿಂದ ತಪ್ಪಿಸಿಕೊಳ್ಳಲು ಸುಳ್ಳು ಪುಸ್ತಕ ತಂದಿದ್ದು, ಈ ಪುಸ್ತಕದಲ್ಲಿರುವ ಯಾವುದಾದರೂ ಒಂದು ಆರೋಪವನ್ನು ಬಿಜೆಪಿಯವರು ಹಿಂದಿನ 3 ವರ್ಷಗಳಲ್ಲಿ ಸದನದ ಒಳಗೆ ಅಥವಾ ಸದನದ ಹೊರಗೆ ಪ್ರಸ್ತಾಪ ಮಾಡಿದ್ದಾರಾ? ಎಂದು ಪ್ರಶ್ನಿಸಿದರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *