Breaking News

ನಾನು ಎಐಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ನಾಮಿನೇಷನ್ ಮಾಡಿಲ್ಲ, ಮಾಡೋದೂ ಇಲ್ಲ : ಮಲ್ಲಿಕಾರ್ಜುನ ಖರ್ಗೆ


ಕಲಬುರ್ಗಿ : ನಾನು ಎಐಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ನಾಮಿನೇಷನ್ ಮಾಡಿಲ್ಲ. ಮಾಡೋದೂ ಇಲ್ಲ. ಪಕ್ಷ ನನಗೆ ಯಾವುದೇ ಜವಾಬ್ದಾರಿ ಕೊಟ್ರೂ ನಿಭಾಯಿಸಲು ಸಿದ್ಧ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಲಬುರ್ಗಿಯ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಹೆಸರು ಕೇಳಿ ಬರುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ, ಪಕ್ಷ ಏನು ಜವಾಬ್ದಾರಿ ಕೊಡುತ್ತೋ ಮಾಡಲು ನಾನು ಸಿದ್ದನಿದ್ದೇನೆ ಎಂದರು.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿ ಇರೋರು ನಾಮಿನೇಷನ್ ಮಾಡುತ್ತಿದ್ದಾರೆ. ನಾನು ಯಾವುದಕ್ಕೂ ನಾಮಿನೇಷನ್ ಮಾಡಿಲ್ಲ. ಪಕ್ಷಕ್ಕೆ ನಿಷ್ಟೆಯಾಗಿ ಕೆಲಸ ಮಾಡುವುದಷ್ಟೇ ನಮ್ಮ ಕೆಲಸ. ನಮ್ಮ ನಾಯಕರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರು ಏನ್ ಹೇಳ್ತಾರೆ ಅವದನ್ನು ಕೇಳುತ್ತೇನೆ ಎಂದರು.‌ ವಯಕ್ತಿಕವಾಗಿ ನನ್ನ ಅಭಿಪ್ರಾಯ ಅಂದ್ರೆ ರಾಹುಲ್ ಗಾಂಧಿ ಅವರೇ ಎಐಸಿಸಿ ಅಧ್ಯಕ್ಷರಾಗಬೇಕು. ಆದ್ರೆ ಇತ್ತಿಚಿಗೆ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿದಾಗ, ಲ ನಮ್ಮ ಕುಟುಂಬದಿಂದ ಯಾರೂ ಬೇಡ ಅಂತ ಅವರು ಖಡಾಖಂಡಿತವಾಗಿ ಹೇಳಿದ್ದಾರೆ. ಈಗ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ಶುರುವಾಗಿದೆ. ಏನಾಗುತ್ತೋ ನೋಡೋಣ ಎಂದರು.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *