Breaking News

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್‌ ಪೌಲ್‌ ನ್ನು ನೇಮಕ ಮಾಡಿದ್ದು ಸಿಎಂ



ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್‌ ಪೌಲ್‌ ಅವರು ನೇಮಕವಾಗಿದ್ದೇ ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದಾಗ.ಪೌಲ್‌ ಬಗ್ಗೆ ದೂರುಗಳಿದ್ದರೂ, ಪ್ರಮುಖ ಹುದ್ದೆ ನೀಡಿದ್ದರು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದರು.

ಕಲಾಪ ಮುಂದೂಡಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದ ಅವರು, ‍ಪಿಎಸ್‌ಐ ಹಗರಣ ಬಯಲಿಗೆ ಎಳೆದದ್ದೇ ಕಾಂಗ್ರೆಸ್. ಸಿಐಡಿ ದಾಳಿ ನಂತರ ಪೌಲ್‌ ಅವರನ್ನು ವರ್ಗಾವಣೆ ಮಾಡಿದ್ದರು. ಒತ್ತಡ ಹೆಚ್ಚಾದ ಮೇಲೆ ಬಂಧಿಸಿದರು’ ಎಂದರು.

‘ಇಲ್ಲಿಯವರೆಗೂ ಎಜಿಡಿಪಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಸಿಆರ್‌ಪಿಸಿ 164ರ ಹೇಳಿಕೆ ಕೊಡಿಸಿಲ್ಲ. ಅವರ ಮಂಪರು ಪರೀಕ್ಷೆ ಆಗಬೇಕು. ಆಗ ಇದರ ಹಿಂದೆ ಇರುವ ರಾಜಕಾರಣಿಗಳ ಹೆಸರು ಬಯಲಿಗೆ ಬರುತ್ತದೆ’ ಎಂದರು.

‘ಬಿಜೆಪಿ ಶಾಸಕ ಬಸವರಾಜ ದಢೇಸೂಗುರ್‌ ಅವರು ಆಡಿಯೊದಲ್ಲಿನ ಧ್ವನಿ ನನ್ನದೆ, ನಾನು ₹ 15 ಲಕ್ಷ ತೆಗೆದುಕೊಂಡಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾನೆ. ಲಂಚ ಕೊಟ್ಟವರನ್ನೇ ಹೆದರಿಸಿದ್ದಾನೆ. ಅವನ ವಿಚಾರಣೆ ಮಾಡಿಲ್ಲ. ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಈ ಹಗರಣದಲ್ಲಿ ಒಬ್ಬ ಮಾಜಿ ಮುಖ್ಯಮಂತ್ರಿ ಮಗನ ಕೈವಾಡವಿದೆ ಎಂದು ಹೇಳಿದ್ದಾರೆ. ಕೈವಾಡವಿರುವುದು ಯಡಿಯೂರಪ್ಪ ಅವರ ಮಗನಾ? ದೇವೇಗೌಡ, ಸಿದ್ದರಾಮಯ್ಯನ ಮಗನಾ’ ಎಂದು ಪ್ರಶ್ನಿಸಿದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *