Breaking News

ಕಾಂಗ್ರೆಸ್‌ ನಾಯಕರು ರಾಜ್ಯ ರಾಜಕೀಯದ ಘನತೆಯನ್ನು ಮಣ್ಣುಪಾಲು ಮಾಡಿದ್ದಾರೆ : ಸುಧಾಕರ್


ಬೆಂಗಳೂರು: ಪೇಸಿಎಂ ಅಭಿಯಾನದ ಮೂಲಕ ಕಾಂಗ್ರೆಸ್‌ ನಾಯಕರು ರಾಜ್ಯ ರಾಜಕೀಯದ ಘನತೆಯನ್ನು ಮಣ್ಣುಪಾಲು ಮಾಡಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್‌ ನಾಯಕರು ವೈಯಕ್ತಿಕ ಲಾಭಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ದೂಷಿಸಿದ್ದಾರೆ. ಇಡೀ ದೇಶದಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್‌ ನಾಯಕರು ಇಂತಹ ಕೀಳುಮಟ್ಟದ ರಾಜಕೀಯ ಮಾಡುವುದರಲ್ಲಿ ನಿಸ್ಸೀಮರೆಂದು ಸಾಬೀತು ಮಾಡುವ ಮೂಲಕ ಮತ್ತೊಮ್ಮೆ ಬೆತ್ತಲಾಗಿದ್ದಾರೆ. ಆದರೆ ಏನೇ ಮಾಡಿದರೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.

ನಟ ಅಖಿಲ್ ಅಯ್ಯರ್‌ ಎಂಬುವರ ಹೆಸರನ್ನೂ ದುರ್ಬಳಕೆ ಮಾಡಿಕೊಂಡಿದ್ದು, ಅವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ. ಕಾಂಗ್ರೆಸ್‌ನವರು ಸತ್ಯ ಹರಿಶ್ಚಂದ್ರರಂತೆ ವರ್ತನೆ ಮಾಡುತ್ತಿದ್ದಾರೆ. ಆದರೆ ಅವರ ಹಿರಿಯ ನಾಯಕರೇ ಜಾಮೀನು ಮೇಲೆ ಹೊರಗಿದ್ದಾರೆ. ಭ್ರಷ್ಟಾಚಾರದಿಂದಲೇ ಕಾಂಗ್ರೆಸ್‌ ಅಧಿಕಾರ ಕಳೆದುಕೊಂಡಿದೆ. ಇವರಿಗೆ ಯಾವ ನೈತಿಕತೆ ಇದೆ ಎಂದು ಸಚಿವ ಸುಧಾಕರ್ ಪ್ರಶ್ನೆ ಮಾಡಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *