Breaking News

ಹವಮಾನ ಇಲಾಖೆಯಿಂದ ಮಹತ್ವದ ಮಾಹಿತಿ



ಬೆಂಗಳೂರು: ನಗರದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಶುರುವಾಗಿದೆ. ಕಬ್ಬನ್​ ಪಾರ್ಕ್​​, ಕೆ.ಆರ್.ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ, ಡಬಲ್ ರೋಡ್ ಸೇರಿದಂತೆ ಹಲವೆಡೆ ಮಳೆ ಆಗಿದ್ದು, ಮಳೆಯಿಂದ ಬೈಕ್ ಸವಾರರು, ಪಾದಚಾರಿಗಳು ಪರದಾಡಿದ್ದಾರೆ.

ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆ ರಾಜ್ಯದಲ್ಲಿ 2 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಸಾಧ್ಯತೆ ಎನ್ನಲಾಗುತ್ತಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆ ಬಗ್ಗೆ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *