Breaking News

ನಾಳೆ ಹುಬ್ಬಳ್ಳಿಯಲ್ಲಿ ರಾಷ್ಟ್ರಪತಿಗೆ ಪೌರಸನ್ಮಾನ


ಹುಬ್ಬಳ್ಳಿ: ನಗರದಲ್ಲಿ ಸೋಮವಾರ (ಸೆ 26) ರಾಷ್ಟ್ರಪತಿ ದ್ರೌಪದಿ ಮುರ್ಮು  ಅವರಿಗೆ ಪೌರಸನ್ಮಾನ ಮಾಡಲಾಗುತ್ತದೆ.

ಕಾರ್ಯಕ್ರಮಕ್ಕಾಗಿ ಅಗತ್ಯ ಸಿದ್ಧತೆಗಳು ಭರದಿಂದ ಸಾಗಿವೆ. ಈ ನಡುವೆ ಕಾರ್ಯಕ್ರಮದಲ್ಲಿ ನಗರದ ಪ್ರಮುಖ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ವೇದಿಕೆಯ ಮೇಲೆ ಸ್ಥಾನ ನೀಡದಿರುವ ಬಗ್ಗೆ ಬಿಜೆಪಿ ವಲಯದಲ್ಲಿ ತೀವ್ರ ಆಕ್ಷೇಪ ಕೇಳಿಬಂದಿದೆ. ವೇದಿಕೆ ಮೇಲಿನ ಗಣ್ಯರ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್​ ಅವರ ಹೆಸರನ್ನು ಕೈಬಿಡಲಾಗಿದೆ. ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಿರಬಹುದು ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಾರ್ಯಕ್ರಮದ ವಿವರಗಳು ಇದೀಗ ಬಹಿರಂಗಗೊಂಡಿದ್ದು ವೇದಿಕೆಯಲ್ಲಿ ಒಟ್ಟು 9 ಮಂದಿಗೆ ಸ್ಥಾನವಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವರಾದ ಅಶ್ವತ್ಥ್ ನಾರಾಯಣ, ಶಂಕರ್ ಪಾಟೀಲ್ ಮುನೇನಕೊಪ್ಪ, ಬೈರತಿ ಬಸವರಾಜ, ಹಾಲಪ್ಪ ಆಚಾರ್ ಹುಬ್ಬಳ್ಳಿ ಧಾರವಾಡ ಮೇಯರ್ ಈರೇಶ್ ಅಂಚಟಗೇರಿ ಅವರಿಗೆ ಮಾತ್ರವೇ ವೇದಿಕೆ ಹತ್ತಲು ಅವಕಾಶ ನೀಡಲಾಗಿದೆ. ವೇದಿಕೆಯ ಮೇಲೆ ಜಗದೀಶ್ ಶೆಟ್ಟರ್ ಅವರಿಗೂ ಅವಕಾಶ ಸಿಗಬೇಕಿತ್ತು ಎನ್ನುವುದು ಪಕ್ಷದ ಕಾರ್ಯಕರ್ತರ ಅಗ್ರಹವಾಗಿದೆ. ಆದರೆ ಜಗದೀಶ್ ಶೆಟ್ಟರ್ ಅವರು ಈ ಬಗ್ಗೆ ಯೋಚಿಸದೆ ತಮ್ಮಪಾಡಿಗೆ ತಾವು ಕಾರ್ಯಕ್ರಮದ ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *