Breaking News

ಮೈಸೂರು ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ಆಗಮನ


ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮಿಸಲಿದ್ದಾರೆ.

ಸೋಮವಾರ ಬೆಳಿಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದು, 9 ಗಂಟೆಗೆ ಮೈಸೂರಿನ ಮಂಡಕಳ್ಳಿ ಏರ್​ಪೋರ್ಟ್​ಗೆ ಆಗಮಿಸಲಿದ್ದಾರೆ. ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 10 ಗಂಟೆಗೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ. 10:45ಕ್ಕೆ ಚಾಮುಂಡಿ ಬೆಟ್ಟದಿಂದ ಹೊರಟು, ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುರ್ಮು ಭಾಗವಹಿಸಲಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *