ಬೆಂಗಳೂರು- ಕಳೆದ ಎರಡು ವಾರಗಳಲ್ಲಿ ಬಿಡುವು ಕೊಟ್ಟಿದ್ದ ಮಳೆ ನಿನ್ನೆಯಿಂದ ಮತ್ತೆ ಪ್ರಾರಂಭವಾಗಿದ್ದು, ಇನ್ನು ಮೂರು ದಿನಗಳ ಕಾಲ ಮುಂದುವರೆಯುವ ಸಾಧ್ಯತೆಗಳಿವೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ.
ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಮಳೆಯಾಗುವ ಸಾಧ್ಯತೆಗಳಿವೆ.
ಕಳೆದ ಎರಡು ವಾರಗಳಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಬಿಡುವು ಕೊಟ್ಟಿದ್ದು, ಆದರೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಮುಂದುವರೆದಿದ್ದು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲೂ ಮಳೆ ಮುಂದುವರೆದಿದೆ. ಸೆ.29, 30ರಿಂದ ಇನ್ನೊಂದು ಸುತ್ತಿನ ಮಳೆಯಾಗಲಿದ್ದು, ಆ ಸಂದರ್ಭದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

