Breaking News

ಮೈಸೂರು ದಸರಾ : ರಾಷ್ಟ್ರಪತಿಯಿಂದ ಮೊದಲ ಬಾರಿಗೆ ಉದ್ಘಾಟನೆ


ಮೈಸೂರು: ಸಾಂಸ್ಕೃತಿಕ ಸಿರಿ ಮತ್ತು ಧಾರ್ವಿುಕ ಐಸಿರಿಯ ಸಮ್ಮಿಲನವಾದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವೊಂದು ಸುಂದರ ದೃಶ್ಯಕಾವ್ಯ. ವರ್ಷಕ್ಕೊಮ್ಮೆ ಬರುವ ಈ ರಮಣೀಯ ಘಳಿಗೆಗೆ ಸಾಂಸ್ಕೃತಿಕ ನಗರಿ ಮದುವಣಗಿತ್ತಿಯಂತೆ ಸಿಂಗಾರಗೊಂಡು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

ಕೋವಿಡ್ ಸಂಕ್ರಮಣದಿಂದ ಕಳೆದ 2 ವರ್ಷ ಸರಳವಾಗಿ ನಡೆದಿದ್ದ ಉತ್ಸವದಲ್ಲಿ ಈ ಬಾರಿ ಸಡಗರ ಮೇಳೈಸಲಿದೆ. ಸೆ. 26ರಂದು ನಾಡಹಬ್ಬದ ಅಂಕದ ಪರದೆ ಗರಿ ಬಿಚ್ಚಲಿದೆ.

ಮೊದಲ ಬಾರಿಗೆ ರಾಷ್ಟ್ರಪತಿಯಿಂದ ಚಾಲನೆ: ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರೆಗೆ ಸೆ.26ರಂದು ಬೆಳಗ್ಗೆ 9.45ರಿಂದ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ರಾಷ್ಟ್ರಪತಿ ದ್ರೌಪದಿ ಮುಮು ವಿಧ್ಯುಕ್ತವಾಗಿ ಚಾಲನೆ ನೀಡಿ ಮುನ್ನುಡಿ ಬರೆಯಲಿದ್ದಾರೆ. ದೇಶದ ಪ್ರಥಮ ಪ್ರಜೆಯಿಂದ ಉದ್ಘಾಟನೆ ಆಗುತ್ತಿರುವುದು ಇದೇ ಮೊದಲು. ಬಳಿಕ ಸಾಲು ಸಾಲು ದಸರಾ ಚಟುವಟಿಕೆಗಳು ಅನಾವರಣಗೊಳ್ಳಲಿದ್ದು, 10 ದಿನಗಳ ಕಾಲ ಹಬ್ಬದ ನವೋಲ್ಲಾಸ ಕಳೆಗಟ್ಟಲಿದೆ.

Share News

About BigTv News

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *